ಈಜು ಸ್ಪರ್ಧೆ: ಫಿಲೋಮಿನಾ ಕಾಲೇಜಿನ ದಿಗಂತ್ ವಿ. ಎಸ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Chandrashekhara Kulamarva
0


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), 28ನೇ ಅಡ್ಡರಸ್ತೆ ಮಲ್ಲೇಶ್ವರಂ, ಬೆಂಗಳೂರು  ಇದರ  ಆಶ್ರಯದಲ್ಲಿ ಅ 29 ರಂದು ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ 'ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ವಿದ್ಯಾರ್ಥಿಗಳ ರಾಜ್ಯಮಟ್ಟದ ಈಜು ಸ್ಪರ್ಧೆ 2025 - 26' ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ದಿಗಂತ್ ವಿ. ಎಸ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 


ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ. ಎಸ್ 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನ, 100ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ, 200ಮೀ ಬ್ಯಾಕ್ ಸ್ಟ್ರೋಕ್ ಮತ್ತು 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಕಂಚಿನ ಪದಕ ಪದಕವನ್ನು, ಪ್ರಾಧಿ ಕ್ಲಾರೆ ಪಿಂಟೋ 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಬೆಳ್ಳಿ ಹಾಗೂ 4×100ಮೀ  ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ  ಕಂಚಿನ ಪದಕ ಪದಕವನ್ನು ಹಾಗೂ ಅನ್ವಿತ್ ರೈ 50ಮೀ ಬಟರ್ ಫ್ಲೈ  ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.


ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ ಮತ್ತು ಕ್ರಾಂತಿ ತೇಜಾ ತರಬೇತಿ ನೀಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top