ತೆಂಕನಿಡಿಯೂರು ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Upayuktha
0


ತೆಂಕನಿಡಿಯೂರು: ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ಮಂಗಳವಾರ  ತೆಂಕನಿಡಿಯೂರು ಕಾಲೇಜಿನಲ್ಲಿ ಸದ್ಭಾವನಾ ದಿವಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಪ್ರಶಾಂತ್ ನಿಲಾವರ್ ಇವರು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಸಾಧನೆ ಮತ್ತು ದೇಶಕ್ಕಾಗಿ ಮಾಡಿದ ಹಾಗೂ ಕೊಟ್ಟ ಕೊಡುಗೆಗಳ ಬಗ್ಗೆ ವಿವರಣೆ ನೀಡಿ ಎನ್ಎಸ್ಎಸ್ ಸ್ವಯಂಸೇವಕರ ಬಗ್ಗೆ ಮತ್ತು ಕಾಲೇಜಿನಲ್ಲಿ ಎನ್ಎಸ್ಎಸ್ಸ್ವ ಯಂಸೇವಕರಾಗುವುದರ ಮಹತ್ವದ ಬಗ್ಗೆ ಮಾತನಾಡಿದರು. ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರರವರು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ಪ್ರಶಂಸಿಸಿ ಮಾತನಾಡಿದರು.


ಸ್ವಯಂಸೇವಕ ನಾಯಕಿ ಕಿತ್ನಾ ಮತ್ತು ತೇಜಸ್ವಿನಿ ಕಾರ್ಯಕ್ರಮವನ್ನು ಆಯೋಜಿಸಿ ನಿರ್ವಹಿಸಿದರು. ಎನ್‌.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಪ್ರಸಾದ್ ಎಚ್ಎಂ ಮತ್ತು ಸುಷ್ಮಾ ಟಿ ಅವರು ಪ್ರಬಂಧ ಸ್ಪರ್ಧೆ ಪೋಸ್ಟರ್ ಮೇಕಿಂಗ್ ಹಾಗೂ ಚರ್ಚಾ ಸ್ಪರ್ಧೆಯ ವಿಜೇತರನ್ನು ಘೋಷಿಸಿದರು. ಪ್ರಥಮ ಬಿಸಿಎ ಸ್ವಯಂಸೇವಕಿಯಾದ ಜೈಬಾ ಭರತನಾಟ್ಯಂ ಕಲೆಯನ್ನು ಪ್ರದರ್ಶಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top