ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆ (ITI) ಮತ್ತು ಯುವನಿಕಾ ಫೌಂಡೇಶನ್ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ಇತ್ತೀಚೆಗೆ ಭಾವಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು, "ಯುವ ಪೀಳಿಗೆ ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ರಾಷ್ಟ್ರ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ" ಎಂದು ತಿಳಿಸಿದರು.
ಸಂವಿಧಾನದ ಆಶಯಗಳು, ನಾಗರಿಕರ ಮೂಲಭೂತ ಕರ್ತವ್ಯಗಳು ಹಾಗೂ ಪ್ರಜಾಸತ್ತಾತ್ಮಕ ಬದುಕಿನ ಮಹತ್ವವನ್ನು ಅವರು ನೆರೆದಿದ್ದ ಯುವಜನತೆಗೆ ಮನವರಿಕೆ ಮಾಡಿಕೊಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ರಾಜಾರಾಮ ತೋಳ್ಪಾಡಿ ಅವರು, ಸಂವಿಧಾನದ ಸಮಾಜಮುಖಿ ತತ್ವಗಳು ಮತ್ತು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನಾಗರಿಕರ ಜಾಗೃತ ಪಾತ್ರದ ಕುರಿತು ವಿಸ್ತೃತವಾಗಿ ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆವ್. ಫಾ. ಜಾನ್ ಡಿ’ಸೋಜಾ ಎಸ್‌ಜೆ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂವಿಧಾನ ಅರಿವು ಅಗತ್ಯವಿದೆ ಎಂದು ಹೇಳಿದರು.
ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರೋಷನ್ ಡಿಸೋಜಾ ಸ್ವಾಗತ ಭಾಷಣ ನೆರವೇರಿಸಿದರು.
ಕಾರ್ಯಕ್ರಮ ಸಂಯೋಜಕ ರಘುವೀರ್ ಸೂಟರ್ ಪೇಟೆ ಅವರು ಸಂವಿಧಾನ ದಿನಾಚರಣೆಯ ಪ್ರಾಮುಖ್ಯತೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಸಂಸ್ಥೆಯ ನೋಯೆಲ್ ಲೋಬೊ, ವಿಲ್ಸನ್ ಮತ್ತು ಪದ್ಮಾವತಿ ಅವರು ಕಾರ್ಯಕ್ರಮದ ಸುಗಮ ನಿರ್ವಹಣೆಯಲ್ಲಿ ಸಹಕರಿಸಿದರು. ಶ್ರೇಯಸ್ ಅವರು ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೆ . ಕಸ್ತೂರಿ. ನಿರ್ದೇಶಕರು ಮತ್ತು ಸಂತೋಷ್ ಯಾದವ್ ಯುವನಿಕಾ ಫೌಂಡೇಶನ್ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಹಿತೇಶ್ ಬಂಗೇರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಮುದಾಯದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ, ಭಾರತೀಯ ಸಂವಿಧಾನದ ಮೌಲ್ಯಗಳನ್ನು ಪಾಲಿಸುವ ತಮ್ಮ ಬದ್ಧತೆಯನ್ನು ಪುನರ್ ದೃಢಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




