ಇಂದಿನಿಂದ ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ 2025-26 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ

Chandrashekhara Kulamarva
0


  • 4, 5 ಹಾಗೂ 6 ರಂದು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳು 
  • ವಿವೇಕಾನಂದ ಪದವಿಪೂರ್ವ ಕಾಲೇಜಿನ 60 ನೇ ವರ್ಷಾಚರಣೆ
  • ಸಾಮಾಜಿಕ ಹಾಗೂ ಕಲಾ ಕ್ಷೇತ್ರದ ಹಲವು ಗಣ್ಯರು ಹಾಗೂ ವಾಗ್ಮಿಗಳು ಭಾಗಿ


ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವಕಾಲೇಜು 60 ಸಂವತ್ಸರಗಳನ್ನು ಪೂರೈಸುತ್ತಿದ್ದು ಈ ಸಂಭ್ರಮಾಚರಣೆಯ ಸಂದರ್ಭದಲ್ಲಿವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ನವಂಬರ್4,5,6 ನೇ ತಾರೀಕು ಮಂಗಳವಾರ, ಬುಧವಾರ ಮತ್ತು ಗುರುವಾರದಂದು ಪ್ರಸಕ್ತ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕೋತ್ಸವವು ನಡೆಯಲಿದೆ. 


ಸಾಧನಾದರ್ಪಣಂ

ನವಂಬರ್ 4ರ ಬೆಳಗ್ಗೆ 7.30 ಕ್ಕೆ ಸರಿಯಾಗಿಕಶೆಕೋಡಿ ಸೂರ್ಯನಾರಾಯಣ ಭಟ್ ನೇತೃತ್ವದಲ್ಲಿಗಣಹೋಮ ನಡೆಯಲಿದ್ದು, ಮಧ್ಯಾಹ್ನ 1.30 ಕ್ಕೆ ಸರಿಯಾಗಿ ವೀರರಾಣಿಅಬ್ಬಕ್ಕ ವೇದಿಕೆಯಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಬಳಿಕ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ಕಾಲೇಜು ಕ್ರೀಡಾಕೂಟದ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಿ ಗೌರವಿಸುವ‘ಸಾಧನಾದರ್ಪಣಂʼಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೆ.ಎನ್.ಸುಬ್ರಹ್ಮಣ್ಯ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವಿ.ಜಿ. ಭಟ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಲೆಕ್ಕ ಪರಿಶೋಧಕರಾದ  ಸಿ.ಎ. ದೀಪ್ಷಿಕ್ ಕೆ. ಭಾಗಿಯಾಗಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಮುರಳೀಕೃಷ್ಣ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.   



ಪರಂಪರಾದರ್ಶನಂ

ನವಂಬರ್ 5ನೇ ತಾರೀಕಿಗೆ‘ಪರಂಪರಾ ದರ್ಶನಂʼ ಎಂಬ ಶೀರ್ಷಿಕೆಯೊಂದಿಗೆ ಸಭಾ ಕಾರ್ಯಕ್ರಮವು ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರಪಿ. ಇವರು ವಹಿಸಿಕೊಳ್ಳಲಿದ್ದಾರೆ. ಮೂಡಬಿದಿರೆಯ ಖ್ಯಾತವಾಗ್ಮಿಗಳಾದ ಎನ್. ಆರ್ ದಾಮೋದರಶರ್ಮಾ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಅಭ್ಯಾಗತರಾಗಿ ಸತೀಶ್ ರಾವ್ ಪಿ,ಉಪಾಧ್ಯಕ್ಷರು, ಆಡಳಿತಮಂಡಳಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಆಗಮಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಕೆ. ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ  ಹರಿಣಾಕ್ಷಿಜೆ. ಶೆಟ್ಟಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ರಾಷ್ಟ್ರ, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವು ಈ ದಿನ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕಕಾರ್ಯಕ್ರಮ ನಡೆಯಲಿದೆ.


ಷಷ್ಠ್ಯಬ್ದಆಚರಣಂ

ನವಂಬರ್ 6ನೇ ತಾರೀಕಿನಂದು ಸಂಸ್ಥೆಯ 60ನೇ ವರ್ಷಾಚರಣೆಯನ್ನು ಆಚರಿಸುವ ಸಲುವಾಗಿ ‘ಷಷ್ಠ್ಯಬ್ದ ಆಚರಣಂʼಎಂಬ ಶೀರ್ಷಿಕೆಯೊಂದಿಗೆ ಕಾಲೇಜು ವಾರ್ಷಿಕೋತ್ಸವವು ನಡೆಯಲಿದೆ. ಮೂರನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಇವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್, ತುಳು ಚಲನಚಿತ್ರ ನಟರು ಹಾಗೂ ಕಾರ್ಯಕ್ರಮದ ಪ್ರಧಾನ ವಕ್ತಾರರಾಗಿ ಸಂವಾದಚಾನಲ್, ಬೆಂಗಳೂರು ಇದರ ಸಂಪಾದಕರಾದ ವೃಕ್ಷಕ್‌ ಭಟ್ ನಿವಣೆ ಪಾಲ್ಗೊಳ್ಳಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಇಂದಿರಾ ಬಿ. ಕೆ. ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಣೆ ಈ ದಿನ ನಡೆಯಲಿದೆ.  ಸಭಾ ಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top