ಅಗಲಿದ ಪತ್ರಕರ್ತ ನಾಗರಾಜ್‌ರಿಗೆ ನುಡಿನಮನ

Chandrashekhara Kulamarva
0



ಮಂಗಳೂರು: ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ವೀಡಿಯೊ ಜರ್ನಲಿಸ್ಟ್ ನಾಗರಾಜ್ ಅವರಿಗೆ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ ‘ಎರಡು ದಶಕದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಾಗರಾಜ್ ಅವರ ಕುಟುಂಬಕ್ಕೆ ಪರಿಹಾರ ಧನ ಒದಗಿಸಲು ಎಂಎಲ್‌ಸಿ ಐವನ್ ಡಿಸೋಜಾ ಅವರ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಲಾಗುವುದು ಎಂದರು.


ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ವಿಜಯ ಕೋಟ್ಯಾನ್ ಪಡು ನುಡಿ ನಮನ ಸಲ್ಲಿಸಿದರು. ದಿ. ನಾಗರಾಜ್ ಕುಟುಂಬದ ಸದಸ್ಯರು, ಪತ್ರಕರ್ತರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top