ಪೊಲೀಸ್ ಇಲಾಖೆಗೆ ಸಮನಾಗಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕದಳದ ಸೇವೆ ಅನನ್ಯ: ಹರಿರಾಂ ಶಂಕರ್

Upayuktha
0


ಉಡುಪಿ: ಗೃಹರಕ್ಷಕದಳವು ಪೊಲೀಸ್ ಇಲಾಖೆಗೆ ಸರಿಸಮನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕೊರೋನಾ ಕಾಲದಲ್ಲಿ ಗೃಹರಕ್ಷಕದಳದ ಕಾರ್ಯವೈಖರಿಯು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕ್ಷಕದಳದ ಸಿಬ್ಬಂದಿಗಳು ಪೊಲೀಸರ ಮಾದರಿಯಲ್ಲೇ ಸೇವೆ ನೀಡಿ ದೇಶದಲ್ಲಿ ಹೆಸರುವಾಸಿಯಾಗಿದ್ದು ಗೃಹರಕ್ಷಕದಳದ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಂ ಶಂಕರ್ ಹೇಳಿದರು.

 

ಅವರು ಶುಕ್ರವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.


ಅತಿ ಹೆಚ್ಚು ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಗೃಹರಕ್ಷಕದಳವು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತದೆ. ವಾಹನ ಸಂಚಾರದ ನಿಭಾವಣೆಯಲ್ಲಿ ಪೊಲೀಸರಿಗಿಂತಲೂ ಒಂದು ಹೆಜ್ಜೆ ಮುಂದಿದ್ದು ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿ ಖುದ್ದು ಜನರೇ ಗೃಹರಕ್ಷಕರನ್ನು ನಿಯುಕ್ತಿಗೊಳಿಸುವಂತೆ ಕೇಳಿಕೊಳ್ಳುವ ಉದಾಹರಣೆಗಳಿವೆ. ಇದು ಗೃಹರಕ್ಷಕರ ಕರ್ತವ್ಯ ಬದ್ದತೆಗೆ ಹಿಡಿದ ಕೈಗನ್ನಡಿಯಾಗಿದೆ. ವಯಸ್ಸಿನ ಬೇಧವಿಲ್ಲದೆ ಗೃಹರಕ್ಷಕರದಳವು ಹಲವು ಜನರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಅವರು ಹೇಳಿದರು.


ಪೊಲೀಸ್ ಇಲಾಖೆಯಂತೆಯೇ ಗೃಹರಕ್ಷಕರಿಗೂ ಯಾವುದೇ ರೀತಿಯ ಆರೋಗ್ಯ ಸೇವೆಗಳು ಸಿಗುವುದಿಲ್ಲ. ಅಫಘಾತಗಳಾದ ಸಂದರ್ಭಗಳಲ್ಲಿ ಅಥವಾ ಅನಾರೋಗ್ಯ ಪೀಡಿತರಾದಾಗ ಚಿಕಿತ್ಸೆಗಾಗಿ ಹಲವಾರು ಲಕ್ಷ ಖರ್ಚಾಗುತ್ತದೆ. ವ್ಯಕ್ತಿಯೊಬ್ಬನು ತನ್ನ ಸಂಪೂರ್ಣ ಜೀವಿತಾವಧಿಯಲ್ಲಿ ದುಡಿದ ಹಣವು ವೈದ್ಯಕೀಯ ವೆಚ್ಚಗಳಿಗಾಗಿ ಖರ್ಚಾಗುತ್ತವೆ. ವ್ಯಕ್ತಿಯು ಅಕಾಲಿಕ ಮರಣ ಹೊಂದಿದಂತಹ ಸಂದರ್ಭಗಳಲ್ಲಿ ಕುಟುಂಬಿಕರಿಗೆ ಯಾವುದೇ ರೀತಿಯ ಆರ್ಥಿಕ ಭದ್ರತೆ ಇರುವುದಿಲ್ಲ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಖಾಸಗಿ ಬ್ಯಾಂಕ್ ಗಳ ಸಹಯೋಗದೊಂದಿಗೆ ಆರೋಗ್ಯ ವಿಮಾ ಪ್ಯಾಕೇಜ್ ಅನ್ನು ದೊರಕುವಂತೆ ಮಾಡಲಾಗುವುದು ಎಂದರು. 


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸಮಾಜದಲ್ಲಿ ತುರ್ತು ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಕ್ರೀಡೆಯಿಂದ ದೈಹಿಕವಾಗಿ ಸದೃಢವಾದ ಆರೋಗ್ಯ ಹೊಂದಬಹುದಾಗಿದೆ ಹಾಗೂ ಸಂಘಟಿತರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. 


ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ, ಅಥ್ಲೆಟಿಕ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಹರಿಪ್ರಸಾದ್ ರೈ, ವಿವಿಧ ಜಿಲ್ಲೆಗಳ ಸಮಾದೇಷ್ಟರು ಉಪಸ್ಥಿತರಿದ್ದರು.


ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿ, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ. ವಂದಿಸಿ, ಬ್ರಹ್ಮಾವರ ಘಟಕದ ಪಿಎಲ್‍ಸಿ ಸ್ಟೀವನ್ ಪ್ರಕಾಶ್ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top