ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಅಗತ್ಯ : ಎಂ.ಎ.ಗಫೂರ್

Upayuktha
0


ಉಡುಪಿ: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. 


ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕಾರ್ಕಳದ ಕೋಟಿ ಚೆನ್ನಯ ಥೀಂ ಆವರಣದಲ್ಲಿ ನಡೆದ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. 


ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಕಲಾವಿದರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಸರಕಾರವು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸಿದೆ. ಕಲೆ, ಸಾಹಿತ್ಯಕ್ಕೆ ಸಾಹಿತಿಗಳ ಕೊಡುಗೆ ಅಪಾರವಾಗಿದ್ದು, ಇತಿಹಾಸದ ಕುರಿತು ಅರಿವು ಮೂಡಿದಾಗ ಉತ್ತಮ ನಾಗರಿಕರಾಗಲು ಸಾಧ್ಯ ಎಂದರು.


ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. 


ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಯಕ್ಷರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾರ್ತಿಕ್ ನಿರೂಪಿಸಿ, ವಂದಿಸಿದರು. 


ಸಭಾ ಕಾರ್ಯಕ್ರಮದ ನಂತರ ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ ನಿರ್ದೇಶನದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನಗೊಂಡಿತು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top