ಗುಂಡು ಎಸೆತದಲ್ಲಿ ವಿದ್ಯಾರಣ್ಯ ವಿದ್ಯಾರ್ಥಿಗೆ ಚಿನ್ನದ ಪದಕ: ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0

 ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ -2025




ಕುಂದಾಪುರ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಬುಧವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ– 2025ರ ಗುಂಡು ಎಸೆತ ಸ್ಪರ್ಧೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದ್ದಾನೆ. ಈ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ  ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಯು ಕಾಳವಾರ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ.


ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ಪ್ರೌಢ ಶಾಲೆ ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ಅವರು ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ  ಸತೀಶ್ ಕುಮಾರ್ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Advt Slider:
To Top