ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನಕದಾಸ ಜಯಂತಿ ಆಚರಣೆ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ  ಪುಷ್ಪ ನಮನವನ್ನು ಸಲ್ಲಿಸಿ, ಮಾತನಾಡುತ್ತಾ "ದಾಸಶ್ರೇಷ್ಠರೆಂದೇ ಹೆಸರುವಾಸಿಯಾಗಿರುವ ಕನಕದಾಸರು ನಮ್ಮ ಪರಂಪರೆಯ ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿದ್ದಾರೆ. ಕನಕದಾಸರ ಜೀವನ ತತ್ವಗಳು, ಬೋಧನೆಗಳು ಹಾಗೂ  ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಫೂರ್ತಿಯನ್ನು ನೀಡುತ್ತಿದೆ. ಭಕ್ತಿ ಮಾರ್ಗದಿಂದ ದೇವರನ್ನು ಒಲಿಸಿಕೊಳ್ಳಬಹುದು ಎಂಬುದಕ್ಕೆ ಕನಕದಾಸರೇ ಸಾಕ್ಷಿ ಎಂದು ನುಡಿದರು. 


ಈ ಸಂದರ್ಭದಲ್ಲಿಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು, ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಅರ್ಪಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top