ಪುತ್ತೂರು: ಒಬ್ಬ ವ್ಯಕ್ತಿಯ ಸಾಧನೆಯ ಹಿಂದೆ ಗುರುವಿನ ಪಾತ್ರ ಬಹು ಮುಖ್ಯವಾಗಿರುತ್ತದೆ. ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮುಖಾಂತರ ನಮ್ಮ ಕೌಶಲ್ಯವನ್ನು ಹೆಚ್ಚಿಸಬೇಕು. ನಮ್ಮ ನಡತೆಯನ್ನು ಸುಧಾರಿಸುತ್ತಾ ಹೋದರೆ ಗುರಿಯೊಂದಿಗೆ ಗೌರವವೂ ಸಾಧ್ಯವಾಗುವುದು ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿಎ ವರುಣ್ ಕೆ. ಪಿ. ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಾಣಿಜ್ಯ ವಿಭಾಗ, ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ "ಬ್ರಾಂಡ್ ಬ್ಯಾಟಲ್" ಸಾಮಥ್ರ್ಯ ನಿರ್ಮಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶ್ರೀ ಕೃಷ್ಣಗಣರಾಜ್ ಭಟ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ಯಶಸ್ಸು ಅಂತಿಮವಲ್ಲ, ವೈಫಲ್ಯ ಶಾಶ್ವತವಲ್ಲ ಎಂಬ ಮಾತಿನಂತೆ, ವಿದ್ಯಾರ್ಥಿಗಳು ಕಷ್ಟದ ಸಮಯದಲ್ಲೂ ತನ್ನ ಹಠವನ್ನು ಬಿಡದೇ ಗೆಲುವಿನತ್ತ ಹೆಜ್ಜೆ ಹಾಕಬೇಕು. ಜೀವನದಲ್ಲಿ ಗೆಲುವನ್ನು ಸಾಧಿಸಲು ಶ್ರೇಷ್ಠ ವ್ಯಕ್ತಿತ್ವಗಳನ್ನು ಆದರ್ಶವಾಗಿಟ್ಟುಕೊಂಡು ಇಟ್ಟುಕೊಂಡು ಸಾಧನೆಯತ್ತ ಸಾಗಬೇಕು. ಇಂತಹ ಕಾರ್ಯಕ್ರಮಗಳು ನಮ್ಮ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಾಣಿಜ್ಯ ಸಂಘದಜೊತೆ ಕಾರ್ಯದರ್ಶಿ ಚಂದನ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಾಣಿಜ್ಯ ಸಂಘದ ಕಾರ್ಯದರ್ಶಿ ಧನುಷ್ ಸ್ವಾಗತಿಸಿ, ವಾಣಿಜ್ಯ ಸಂಘದ ಅಧ್ಯಕ್ಷ ಶಿವಚರಣ ವಂದಿಸಿ, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಹಂಪನ ನಿರೂಪಿಸಿದರು.
ಇಂದಿನ ಆಡ್ ವಲ್ರ್ಡ್ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ಪ್ರಥಮ ಬಿ. ಕಾಂ ‘ಬಿ’ ವಿದ್ಯಾರ್ಥಿನಿಯರು ಮತ್ತು ದ್ವಿತೀಯ ಬಹುಮಾನವನ್ನು ಪ್ರಥಮ ಬಿ.ಕಾಂ ‘ಎ’ ವಿದ್ಯಾರ್ಥಿಗಳು ಪಡೆದಿರುತ್ತಾರೆ.
ಉತ್ಪನ್ನ ಬಿಡುಗಡೆ ಎಂಬ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ದ್ವಿತೀಯ ಬಿ. ಕಾಂ ‘ಎ’ ವಿದ್ಯಾರ್ಥಿನಿಯರು ಮತ್ತು ದ್ವಿತೀಯ ಬಹುಮಾನವನ್ನು ದ್ವಿತೀಯ ಬಿ. ಕಾಂ ‘ಸಿ’ ವಿದ್ಯಾರ್ಥಿನಿಯರು ಪಡೆದಿರುತ್ತಾರೆ.
ವ್ಯಾಪಾರ ಪ್ರಾರಂಭ ಯುಪಿಎಸ್ ಮಾದರಿ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ತೃತೀಯ ಬಿ. ಕಾಂ ‘ಬಿ’ ವಿದ್ಯಾರ್ಥಿಗಳು ಮತ್ತು ದ್ವಿತೀಯ ಬಹುಮಾನವನ್ನು ತೃತೀಯ ಬಿ. ಕಾಂ ‘ಎ’ ವಿದ್ಯಾರ್ಥಿನಿಯರು ಪಡೆದಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







