ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ

Upayuktha
0


ಪುತ್ತೂರು: ನಶೆ ಮತ್ತು ಮದ್ಯವ್ಯಸನ ಅನ್ನುವುದು ಭಾರತದ ಯುವಜನಾಂಗವನ್ನು ಕಾಡುವ ಒಂದು ದೊಡ್ಡ ಸವಾಲು. ಯುವಜನಾಂಗ ವ್ಯಸನ ಮುಕ್ತರಾಗಬೇಕು ಮತ್ತುಅದನ್ನು ತಡೆಗಟ್ಟುವಲ್ಲಿ ಕಾರ್ಯಪ್ರವೃತ್ತರಾಗಬೇಕು. ಭವಿಷ್ಯದ ಭಾರತವನ್ನು ನಿರ್ಮಾಣ ಮಾಡುವ ಯುವಜನರು ನಶಾ ಮುಕ್ತ ಭಾರತಕ್ಕಾಗಿ ಕೈ ಜೋಡಿಸಬೇಕು ಎಂದು ಸ್ನಾತಕೋತ್ತರ ಸಂಶೋಧನ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಹೇಳಿದರು. 


ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಪುತ್ತೂರು ಮತ್ತು ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ಐಕ್ಯತಾ ಸಪ್ತಾಹ ಪ್ರಯುಕ್ತ ನಶಾಮುಕ್ತ ಭಾರತ ಅಭಿಯಾನ ಯೋಜನೆಯ 5ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಕಾಲೇಜಿನ ಆವರಣದಲ್ಲಿ ನಶಾ ಮುಕ್ತ ಭಾರತ ಜಾಗೃತಿ ಜಾಥ ನಡೆಯಿತು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top