ವ್ಯಕ್ತಿತ್ವವು ಆಂತರ್ಯದಿಂದ ಬಾಹ್ಯಕ್ಕೆ ನಿರ್ಮಾಣವಾಗಲಿ: ರಂಜನ್ ಬೆಳ್ಳರ್ಪಾಡಿ

Upayuktha
0


ಪುತ್ತೂರು: ವ್ಯಕ್ತಿ ನಿರ್ಮಾಣದ ಮುಖೇನ ಮಾತ್ರ ರಾಷ್ಟ್ರ ನಿರ್ಮಾಣ ಸಾಧ್ಯ. ಎಲ್ಲಿ ವ್ಯಕ್ತಿತ್ವ ನಿರ್ಮಾಣವಾಗುವುದಿಲ್ಲವೋ ಆ ರಾಷ್ಟ್ರ ಅವನತಿಯತ್ತ ಸಾಗುತ್ತದೆ. ಪ್ರತಿಯೊಬ್ಬನ ಜೀವನದಲ್ಲಿಯೂ ಚಾರಿತ್ರ್ಯ ಮುಖ್ಯವಾದುದು. ಹಣಕ್ಕಿಂತ ವ್ಯಕ್ತಿತ್ವ ಬೇಗನೆ ಜನರ ಗಮನಸೆಳೆಯುತ್ತದೆ. ವ್ಯಕ್ತಿತ್ವ ನಿರ್ಮಾಣ ಆಂತರ್ಯದಿಂದ ಬಾಹ್ಯಕ್ಕೆ ಮುಖ ಮಾಡಿರಬೇಕು ಎಂದು ರಾಮಕೃಷ್ಣ ಮಿಷನ್ ಮತ್ತುಸ್ವಚ್ಛ ಮಂಗಳೂರು ಅಭಿಯಾನದ ಪ್ರಧಾನ ಸಂಯೋಜಕ ರಂಜನ್ ಬೆಳ್ಳರ್ಪಾಡಿ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ನಡೆದ ವಿವೇಕ ಸ್ಮೃತಿ 22ನೇ ಸಂಚಿಕೆಯ ಉಪನ್ಯಾಸ ಮಾಲಿಕೆಯಲ್ಲಿ ‘ವ್ಯಕ್ತಿ ನಿರ್ಮಾಣದ ಮುಖೇನ ರಾಷ್ಟ್ರ ನಿರ್ಮಾಣ ವಿವೇಕ ಪಥ’ ಎಂಬ ವಿಷಯದ ಕುರಿತು ಮಾತನಾಡಿದರು.


ವ್ಯಕ್ತಿಯು ಸುತ್ತಮುತ್ತಲಿನ ಘಟನೆಗಳ ಬಗ್ಗೆ ಜಾಗೃತಿ ಹೊಂದಿರಬೇಕು ಹಾಗೂ ತನ್ನೊಳಗಿನ ಅಂತಃಶಕ್ತಿ ಹೆಚ್ಚು ಮಾಡಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವವಿಕಸನಗೊಳ್ಳಲು ಸಾಧ್ಯ. ನಾವು ಗುರಿ ಮತ್ತು ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ ಎಂದು ಹೇಳಿದರು.


ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಮನುಷ್ಯನೊಳಗೆ ಹಲವಾರು ಬದಲಾವಣೆಗಳು ಗೊತ್ತಿಲ್ಲದೆಯೇ ನಡೆಯುತ್ತಿರುತ್ತದೆ. ಅದನ್ನು ವ್ಯಕ್ತಿಯು ಗುರುತಿಸಿ, ದೇಹದೊಳಗಿನ ತತ್ವಗಳನ್ನು ಅರ್ಥೈಸಿಕೊಳ್ಳಬೇಕು. ವೈಜ್ಞಾನಿಕವಾಗಿ, ಆಧ್ಯಾತ್ಮಿಕವಾಗಿ ದೇಹವನ್ನು ಮುನ್ನಡೆಸಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿಉಪಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಉಪಸ್ಥಿತರಿದ್ದರು. 


ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ ಸ್ವಾಗತಿಸಿದರು, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾಎಸ್. ವಂದಿಸಿ, ದ್ವಿತೀಯ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನನ್ಯ ಅಡಿಗ ಕಾರ್ಯಕ್ರಮವನ್ನು ನಿರ್ವಹಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top