ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೋಲಾರ ಮತ್ತು ಸೈಂಟ್ ಫ್ರಾನ್ಸಿಸ್ ದೀ ಸೇಲ್ಸ್ ಕಾಲೇಜ್ ತಮಕ, ಕೋಲಾರ ಇದರ ಸಹಯೋಗದಲ್ಲಿ ನ 25 ರಂದು ಎಸ್ಎಫ್ಎಸ್ ಕಾಲೇಜು ಕೋಲಾರದಲ್ಲಿ ನಡೆದ 'ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2025-26' ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದುಕೊಂಡು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಅಶ್ವತ್ ಕೆ. ಎಸ್ ತರಬೇತಿ ನೀಡಿರುತ್ತಾರೆ. ಇವರು ಆರ್ಯಾಪು ನಿವಾಸಿ ಬಾಬು ಮರಿಕೆ ಹಾಗೂ ಪವಿತ್ರ ದಂಪತಿಗಳ ಪುತ್ರ.
ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




