ಉಡುಪಿ: ಕನ್ನಡ ಜನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜು ಇದರ ವತಿಯಿಂದ ವಿಶ್ವ ಜಾನಪದ ದಿನಾಚರಣೆ ಹಾಗೂ ಕನ್ನಡ ಜನಪದ ರಾಜ್ಯೋತ್ಸವ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನ. 14ರಂದು ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯೋದಯ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ ಗಣೇಶ್ ರಾವ್, ಜನಪದವು ಅತ್ಯಂತ ವಿಶಾಲವಾದ ವ್ಯವಸ್ಥೆಯಾಗಿದೆ ಇದನ್ನು ನಾವೆಲ್ಲರೂ ಇಂದು ಮರೆತಿದ್ದೇವೆ ಅದನ್ನು ಮತ್ತೊಮ್ಮೆ ನೆನಪಿಸಿಕೊಂಡು ಅದರ ಸತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಜಾನಪದ ಕಲೆಗಳಿಗೆ ವೇದಿಕೆಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದರು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ಮಾತನಾಡಿ, ಕನ್ನಡ ಜನಪದ ಪರಿಷತ್ ವತಿಯಿಂದ ವಿಶ್ವ ಜನಪದ ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿ ಅವರ ಮಾರ್ಗದರ್ಶನದಲ್ಲಿ ನಡೆಸುದರ ಮೂಲಕ ವಿದ್ಯಾರ್ಥಿಗಳಿಗೆ ಜನಪದ ಸಂಸ್ಕೃತಿಯ ಪರಿಚಯವನ್ನು ಮಾಡಿಕೊಡುವ ಕೆಲಸ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಅವರು ಅನೇಕ ಜನಪದ ಗೀತೆಗಳನ್ನು ಹಾಡಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಜನಪದ ಸಂಗೀತದಲ್ಲಿ ಬಹುಮಾನ ವಿಜೇತರಿಗೆ ಗೌರವ ಹಾಗೂ ಕನ್ನಡ ಭಾಷಾ ಶಿಕ್ಷಕರಿಗೆ ಅಭಿನಂದನೆ ನಡೆಯಿತು.
ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜನಪದ ಸಂಸ್ಕೃತಿ ಉಳಿದರೆ ಮಾತ್ರ ನಾವೆಲ್ಲರೂ ಉತ್ತಮ ಬದುಕು ಸಾಗಿಸಬಹುದು ಎಂದರು.
ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ನಮ್ಮ ಜನಪದರು ಪ್ರಪಂಚಕ್ಕೆ ನೀಡಿದ ಈ ಅಪೂರ್ವವಾದ ಸಂಪತ್ತನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಜನಪದ ಪರಿಷತ್ ವತಿಯಿಂದ ಉತ್ತಮ ರೀತಿಯ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್, ಸ್ವಾಗತಿಸಿ ಶುಭ ಹಾರೈಸಿದರು.
ಕನ್ನಡ ಉಪನ್ಯಾಸಕ ನಾಗೇಂದ್ರ ಐತಾಳ್ ವಂದಿಸಿದರು. ಉಪನ್ಯಾಸಕಿ ಅನುಪಮಾ ಕಾರ್ಯಕ್ರಮ ನಿರೂಪಿಸಿದರು.
\
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







