ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಲ್ಲಿ ಯಕ್ಷಗಾನ ಪ್ರದರ್ಶನ

Upayuktha
0


ಪಣಜಿ: ಶುಕ್ರವಾರ ಸಂಜೆ ಪಣಜಿ ಸಮೀಪದ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ 56 ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭದಲ್ಲಿ ಕನ್ನಡದ ಗಂಡುಮೆಟ್ಟಿನ ಕಲೆ ಎಂದೇ ಪ್ರಸಿದ್ಧಿ ಪಡೆದಿರುವ ಯಕ್ಷಗಾನ ಪ್ರಸಂಗವೊಂದರ ತುಣುಕನ್ನು ಪ್ರದರ್ಶಿಸಲಾಯಿತು. ಈ ಮೂಲಕ ಯಕ್ಷಗಾನ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಲ್ಲಿ ಪ್ರದರ್ಶನಗೊಂಡಿದೆ.


ಶ್ರೀಮತಿ ವಿದ್ಯಾ ಕೋಳ್ಯೂರು ನೇತೃತ್ವದಲ್ಲಿ ಯಕ್ಷಮಂಜೂಷಾ ತಂಡದಿಂದ 12 ಜನ ತೆಂಕುತಿಟ್ಟು ಕಲಾವಿದರಿಂದ 9 ನಿಮಿಷಗಳ ಕಾಲ ಯಕ್ಷಗಾನ ಪ್ರದರ್ಶನ ನಡೆಯಿತು. ನೆರೆದ ಗಣ್ಯರ ಸಮೇತ ಹಲವರ ಪ್ರಶಂಸೆಗೆ ಇದು ಪಾತ್ರವಾಯಿತು. ಕಾರ್ಯಕ್ರಮದಲ್ಲಿ ರಿಷಭ್ ಶೆಟ್ಟಿಯವರಿಗೆ ಯಕ್ಷಗಾನದ ಕಿರೀಟ ತೊಡಿಸಿ ಗೌರವಿಸಲಾಯಿತು.



ಕಾಂತಾರ ಚಲನಚಿತ್ರ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ರವರಿಗೆ ಯಕ್ಷಗಾನ ಕಲಾವಿದರ ಮೂಲಕ ಯಕ್ಷಗಾನ ಕಿರೀಟ ತೊಡಿಸಿ ಕರ್ನಾಟಕದ ರಾಜ ಎಂದು ಘೋಷಿಸಿದರು. ಈ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಮಾತನಾಡಿ, ಸೂಪರ್ ಸ್ಟಾರ್ ರಜನೀಕಾಂತ್ ರವರು ಚಲನಚಿತ್ರ ಕ್ಷೇತ್ರದಲ್ಲಿ 50 ವರ್ಷ ಜರ್ನಿ ಪೂರ್ಣಗೊಳಿಸಿದ್ದೀರಿ, ಇದಕ್ಕಾಗಿ ನಿಮಗೆ ಅಭಿನಂದನೆ. ನಾವು ಕೂಡ ಫಿಲ್ಮ್‌ ಇಂಡಸ್ಟೀಗೆ ಬಂದಿದ್ದೇವೆ ನಿಮ್ಮ ದಾರಿಯಲ್ಲಿ ನಡೆದುಕೊಂಡು ಹೋಗಲು. ಇನ್ನೂ ಹೆಚ್ಚು ಭಾರತೀಯ ಸಿನೆಮಾಗೆ ನಿಮ್ಮ ಕೊಡುಗೆ ನೀಡುವಂತಾಗಲಿ ಎಂದು ಸೂಪರ್ ಸ್ಟಾರ್ ರಜನೀಕಾಂತ್ ರವರನ್ನು ಅಭಿನಂದಿಸಿದರು.


ನಾನು 6 ನೇ ತರಗತಿಯಲ್ಲಿದ್ದಾಗಿನಿಂದ ನನ್ನ ಕಲೆಯ ಜೀವನ ಯಕ್ಷಗಾನ ಕಲೆಯಿಂದಲೇ ಆರಂಭಗೊಂಡಿತ್ತು. ಯಕ್ಷಗಾನ ಕಲೆಯನ್ನು ಸಾವಿರಾರು ವರ್ಷಗಳ ಹಿಂದಿನಿಂದ ಪ್ರದರ್ಶನಗೊಳ್ಳುತ್ತಿರುವ ಕಲೆ. ಇಂದಿಗೂ ಕೂಡ ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನಡೆಯುತ್ತದೆ. ನನ್ನ ಚಲನಚಿತ್ರದಲ್ಲಿಯೂ ಇಂತಹ ಕಲೆಯನ್ನು ತೆಗೆದುಕೊಂಡು ಬರುತ್ತೇನೆ ಎಂದು ರಿಷಬ್ ಶೆಟ್ಟಿ ನುಡಿದರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top