ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Chandrashekhara Kulamarva
0



ಕುಂದಾಪುರ: ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಅರುಣ ಮಧ್ಯಸ್ಥ ಮತ್ತು ಶ್ರೀಮತಿ ಲತಾ ಮಧ್ಯಸ್ಥರವರ ಪುತ್ರಿ.


ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ (SGFI) ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆದಿಚುಂಚನಗಿರಿಯಲ್ಲಿ ಇತ್ತೀಚೆಗೆ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top