ಸುರತ್ಕಲ್: ಪ್ರತಿಯೊಬ್ಬ ವಿದ್ಯಾರ್ಥಿಗೂ ಬಲವಾದ ಶೈಕ್ಷಣಿಕ ಅಡಿಪಾಯವನ್ನು ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ರೂಪಿಸಿಕೊಡಬೇಕು. ಬರವಣಿಗೆ, ಓದುವಿಕೆ ಮತ್ತು ಗಣಿತದ ಅರಿವಿನ ಸಾಮರ್ಥ್ಯವನ್ನು ವಿದ್ಯಾರ್ಥಿ ಪಡೆದುಕೊಳ್ಳುವ ಅವಕಾಶ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿಭಾವಂತರಾಗಿದ್ದು ಅವರ ಪ್ರತಿಭೆಯ ಪ್ರಕಾಶನಕ್ಕೆ ಅವಕಾಶ ಲಭ್ಯವಾಗಬೇಕು. ಅಕ್ಕರೆಯಿಂದ ಕಲಿಯುವ ವಾತಾವರಣ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದೊರಕುತ್ತಿದೆ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್‌ನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಪಿ. ನುಡಿದರು.
ಅವರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಅಂಗರಗುಂಡಿ ಕ್ಲಸ್ಟರ್ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್‌ನಲ್ಲಿ ಆಯೋಜಿಸಿರುವ ಎಫ್‌ಎಲ್ ಎನ್ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್‌ನ ಅಧ್ಯಕ್ಷ ಸುಭೋದ್ ದಾಸ್ ಮಾತನಾಡಿ, ಭಾರತ ವಿವಿಧ ರಂಗಗಳಲ್ಲಿ ಪ್ರಗತಿ ಕಾಣುತ್ತಿದ್ದು ಶೈಕ್ಷಣಿಕವಾಗಿ ಬಲಿಷ್ಠವಾಗಬೇಕಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಲಭ್ಯವಾಗುತ್ತಿವೆ ಎಂದರು.
ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳಾ ಅಧ್ಯಕ್ಷತೆ ವಹಿಸಿದ್ದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲ್ ಪುತ್ರನ್, ಶ್ರೀನಿವಾಸ ರಾವ್, ಬಿಆರ್ ಪಿ ವೀಣಾ, ತಣ್ಣೀರು ಬಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ, ಪಣಂಬೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗುಣರತ್ನಾ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ ಕಲಿಕಾ ಹಬ್ಬದ ಯೋಜನೆಯ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶಿಕ್ಷಕಿ ನೀತಾ ತಂತ್ರಿ ವಂದಿಸಿದರು. ಸುಕೇಶಿನಿ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳಿಗೆ ವಿವಿಧ ಕಲಿಕಾ ಸ್ಪರ್ಧೆಗಳು ನಡೆದವು. ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕಿಯರು ಕಲಿಕಾ ಉತ್ಸವದಲ್ಲಿ ಭಾಗವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

