ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವತಿಯಿಂದ ಎಸಿಸಿಎ (Association of Chartered Certified Accountants) ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಲೀಫ್ ಅಕಾಡೆಮಿಯ ನಿರ್ದೇಶಕರಾದ ಸಂಜೀವ್ ಕುಮಾರ್ ಸಿಂಗ್ ಹಾಗೂ ಡೆವಲಪ್ ಮೆಂಟ್ ಆಫೀಸರ್ ಆಗಿರುವ ಧೀರಜ್ ಇವರು ಆಗಮಿಸಿ ಎಸಿಸಿಎ ಕುರಿತಾದ ಸಮಗ್ರ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ, ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್, ಉಪನ್ಯಾಸಕ- ಉಪನ್ಯಾಸಕೇತರ ವೃಂದ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕಿಯರಾದ ಉಷಾ ಎ ಎಂ ಸ್ವಾಗತಿಸಿ, ದಿವ್ಯ ಕೆ ವಂದಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಗ್ರೀಷ್ಮ ಕೆ ಎಸ್ ನಿರೂಪಿಸಿದರು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


