ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ಹೆತ್ತವರ ಸಭೆ
ಪುತ್ತೂರು: ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಲ್ಲರು. ಓದಿರುವುದು ಮರೆತು ಹೋಗುತ್ತದೆ, ನಾವು ದಡ್ಡರು ಎನ್ನುವುದು ಕೇವಲ ಕೀಳರಿಮೆಯೇ ಹೊರತು ವಾಸ್ತವವಲ್ಲ. ಏಕಾಗ್ರತೆಯಿಂದ ಪಾಠ ಕೇಳಿ, ಅರ್ಥೈಸಿಕೊಂಡು, ಅವಿರತ ಪ್ರಯತ್ನ ನಡೆಸಿದರೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿಯ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಯನ್ನು ಮಾಡುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿರ್ಪೂ ವಿದ್ಯಾಲಯದಲ್ಲಿ ಶನಿವಾರ ನಡೆದ ಪೋಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ, ನೀಟ್, ಎನ್‍ಡಿಎ, ಸಿಇಟಿ ಪರೀಕ್ಷೆಗಳು ಪದವಿಪೂರ್ವ ಇಲಾಖಾ ಪರೀಕ್ಷೆಗಳ ಸಂಪೂರ್ಣ ಮಾಹಿತಿ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ತಿಳಿಸಿಕೊಟ್ಟರು. ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಉಪನ್ಯಾಸಕ ವೃಂದ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸಭೆಯಲ್ಲಿ ಹಾಜರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


