ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆ: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Upayuktha
0


ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ 13ರಂದು ಉದ್ಘಾಟನೆಗೊಂಡಿತು.


ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ಗುಂಡೆಸೆತದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಸದಸ್ಯರಾದ ಎ. ಗೋವಿಂದರಾಯ ಶೆಣೈ, ಉಪೇಂದ್ರ ಪೈ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್., ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್, ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತವಾದ ಜಿಗಿತದ ಅಂಕಣವನ್ನೂ ಉದ್ಘಾಟಿಸಲಾಯಿತು.

 

ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾಲೇಜಿನ ವಿದ್ಯಾರ್ಥಿ ನಾಯಕ ಶ್ರೀನಿವಾಸ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಆರ್.ಎಸ್. ಸ್ವಾಗತಿಸಿ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕರಾದ ಕೆ. ಶೀನಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.


ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ ಕೆ. ನೇತೃತ್ವದಲ್ಲಿ ವಿವಿಧ ಅಟೋಟ ಸ್ಪರ್ಧೆಗಳು ನಡೆದವು. ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಜನತಾ ಪದವಿಪೂರ್ವ ಕಾಲೇಜು, ಜನತಾ ಪ್ರೌಢಶಾಲೆ, ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top