ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬಲ್ಮಠ ಇವುಗಳ ಸಹಯೋಗದಲ್ಲಿ 116ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಸಭಾ ಭವನದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮಾತನಾಡಿ ಜಾನಪದರ ಮಾತು, ನಂಬಿಕೆ, ಹಾಡುಗಳಿಂದ ಆರಂಭಗೊಂಡ ಕನ್ನಡ ಸಾಹಿತ್ಯ ಪರಂಪರೆ ವಿಸ್ತರಿಸಿಕೊಂಡು ವಿಶಾಲವಾಗಿ ಬೆಳೆದಿದೆ. ಪ್ರಾಚೀನ ಕನ್ನಡ ಸಾಹಿತ್ಯದಿಂದ ತೊಡಗಿ ಆಧುನಿಕ ಕನ್ನಡ ಸಾಹಿತ್ಯದವರೆಗೆ ಕನ್ನಡ ಸಾಹಿತ್ಯದ ಬೆಳವಣಿಗೆಯ ಇತಿಹಾಸ ಅನನ್ಯವಾದುದು ಎಂದರು.
ನಿವೃತ್ತ ಪ್ರಾಂಶುಪಾಲ ಹಾಗೂ ಲೇಖಕ ಕೃಷ್ಣಮೂರ್ತಿ ಮಾತನಾಡಿ, ಸಾಹಿತ್ಯದ ಓದು ಹಾಗೂ ರಚನೆ ವಿಶಿಷ್ಟ ಅನುಭವವಾಗಿದ್ದು ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡು ಉತ್ತಮ ಸಾಹಿತಿಗಳಾಗಬಹುದು ಎಂದರು.
ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿನಿಯರು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಆತ್ಮ ಸ್ಟೈರ್ಯದಿಂದ ಸ್ವಾಲಂಬಿಗಳಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ ವಿದ್ಯಾರ್ಥಿನಿಯರು ಸಾಹಿತ್ಯದ ಹಾಗೂ ಪತ್ರಿಕೆಯ ಓದಿನ ಮೂಲಕ ಸ್ವಂತ ಅನುಭವವನ್ನು ಅಭಿವ್ಯಕ್ತಿಸುವ ಹಂತಕ್ಕೆ ತಲುಪಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲೆ ವನಿತಾ ದೇವಾಡಿಗ ಅವರನ್ನು ಸಂಮಾನಿಸಲಾಯಿತು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಉಪನ್ಯಾಸಕಿ ಯಶೋದಾ ವಂದಿಸಿದರು. ಸಾಹಿತಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

