ಸುರತ್ಕಲ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅಕ್ರೋಶ ಹೊರ ಹಾಕಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದ್ವೇಷ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ, ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಕಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ. ಯಾವುದೇ ಪ್ರತಿಭಟನೆಗೆ, ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಗಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು.
ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ದಿನಕರ್ ಇಡ್ಯಾ, ಸುನಿಲ್ ಕುಳಾಯಿ, ನಿಕಟ ಪೂರ್ವ ಜನಪ್ರತಿನಿಧಿಗಳು ಬಿಜೆಪಿ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸಾರ್ವಜನಿಕರೂ ಉಪಸ್ಥಿತರಿದ್ದರು. ಪುಷ್ಪರಾಜ್ ಮುಕ್ಕ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

