ಮೂಡುಬಿದಿರೆ: ಕೇರಳದ ತ್ರಿಶೂರ್‌ನಲ್ಲಿ ಜರುಗಿದ ದಕ್ಸಿಣ ಭಾರತದ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ತಂಡವು ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು. ಆ ಮೂಲಕ ಕರ್ನಾಟಕ ರಾಜ್ಯ ತಂಡವನ್ನು ರಾಷ್ಟç ಮಟ್ಟದ ಪಂದ್ಯದಲ್ಲಿ ಪ್ರತಿನಿಧಿಸಲಿದೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಸೇರಿದಂತೆ ಒಟ್ಟು 7 ಪದಕಗಳನ್ನು ಪಡೆಯುದರೊಂದಿಗೆ ದಕ್ಷಿಣ ಭಾರತ ಮಟ್ಟದ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು.
ಚಿನ್ನದ ಪದಕಗಳಿಸಿದವರು: ಶ್ರಾವ್ಯ-(48 ಕೆಜಿ), ಪಾವನಿ-(77 ಕೆಜಿ ಪ್ಲಸ್)
ಬೆಳ್ಳಿಯ ಪದಕ ಗಳಿಸಿದವರು: ದೀಪಿಕಾ-(53 ಕೆಜಿ), ಕಾಂಚನ-(58 ಕೆಜಿ)
ಕಂಚಿನ ಪದಕ ಗಳಿಸಿದವರು: ಪಲ್ಲವಿ-(44 ಕೆಜಿ), ಹಂಸವೇಣಿ-(63 ಕೆಜಿ), ಮಾನಸ-(77 ಕೆಜಿ)
ಕ್ರೀಡಾಪಟುಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




