“ಬಹುಮುಖಿ ಕಾರಂತರು” ಕೃತಿ ಬಿಡುಗಡೆ

Upayuktha
0


ಉಡುಪಿ: ಕಾರಂತರ ಬರವಣಿಗೆ ಬಹುಮುಖಿಯಾದದು, ಅವರಿಗೆ ಎಲ್ಲಾ ರೀತಿಯ ಅಧ್ಯಯನ ಕ್ಷೇತ್ರಗಳ ಆಳವಾದ ಪರಿಶ್ರಮವಿತ್ತು. ಈ ದೃಷ್ಟಿಯಿಂದ ಕಾರಂತರ ಬಹುಮುಖಿ ವ್ಯಕ್ತಿತ್ವವನ್ನು ಇಂದಿನ ಯುವಜನತೆ ಮತ್ತು  ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಗತ್ಯವಿದೆ. ಈ ದೃಷ್ಟಿಯಿಂದ ಡಾ.ಶಿವರಾಮ ಕಾರಂತ ಟ್ರಸ್ಟಿನ ಪ್ರಯತ್ನ ಶ್ಲಾಘನೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಅವರು ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿಯು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳವಾಗಿ ಪರಿಚಯಿಸಲು ಹೊರತಂದಿರುವ  ಟ್ರಸ್ಟಿನ ಸದಸ್ಯೆ ಡಾ.ಭಾರತಿ ಮರವಂತೆ ರಚಿಸಿರುವ “ಬಹುಮುಖಿ ಕಾರಂತರು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.


ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕೃತಿ ಪ್ರಕಟಣೆಯ ಉದ್ದೇಶವನ್ನು ವಿವರಿಸಿದರು. ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಸಿಬ್ಬಂದಿ ವರ್ಷಾ ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top