ಬೆಂಗಳೂರು: ಗುರುರಾಯರ ಸನ್ನಿಧಿಯಲ್ಲಿ ಮಕ್ಕಳ ಆಕರ್ಷಣೀಯ ನೃತ್ಯ ಪ್ರದರ್ಶನ

Chandrashekhara Kulamarva
0


ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಹಾಗೂ ಹುಣ್ಣಿಮೆಯ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆ ಹಾಗೂ ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ತೊಟ್ಟಿಲು ಸೇವೆ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಡಾ|| ರಶ್ಮಿ ವಿಜಯ್ ಅವರ ನಿರ್ದೇಶನದಲ್ಲಿ ಎಸ್.ಎಸ್.ಎನ್.ಕೆ. ಅಕಾಡೆಮಿಯ ಸುಮಾರು 30 ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಪ್ರದರ್ಶನ ತುಂಬಾ ಆಕರ್ಷಣೀಯವಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳೂ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top