ಬೆಂಗಳೂರು: ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟ್ ವತಿಯಿಂದ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಡಿಸೆಂಬರ್ 22, ಸೋಮವಾರ ಸಂಜೆ 5-00ಕ್ಕೆ ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ "ಕಲಾ ರಸ ಧಾರೆ" ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಾಯ್ ಇಂಟರ್ನ್ಯಾಷನಲ್ ಅಧ್ಯಕ್ಷರಾದ ಸಾಯ್ ವೆಂಕಟೇಶ್ ವಹಿಸುವರು. ಸಂಗೀತ ಹಿಮ್ಮೇಳದಲ್ಲಿ : ನಟುವಾಂಗ-ಗುರು. ವಿದುಷಿ ಬಿ.ಯು. ಓಜಸ್ವಿನಿ, ಗಾಯನ-ವಿದುಷಿ ಕು|| ದೀಪ್ತಿ ಎಸ್., ಮೃದಂಗ-ವಿದ್ವಾನ್ ಶ್ರೀ ರಾಜಪುರಂ ಆರ್. ಕಾರ್ತೀಕ್, ಕೊಳಲು- ವಿದ್ವಾನ್ ಕೆ.ಎನ್. ಗಣೇಶ್ ಇವರುಗಳು ನಡೆಸಿಕೊಡಲಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ನಿರ್ದೇಶಕಿ ಬಿ.ಯು. ಓಜಸ್ವಿನಿ ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


