ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳದಲ್ಲಿ ನೂತನ ಬ್ಯಾಂಕಿಂಗ್ ಕಿಯೋಸ್ಕ್

Upayuktha
0
ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ವಯಂ ಚಾಲಿತ ಟಿಕೆಟ್ ಯಂತ್ರ ಅನಾವರಣ



ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ದ್ವಾರದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ನೀಡಲಾದ ಸ್ವಯಂ ಚಾಲಿತ ಟಿಕೆಟ್ ನೀಡುವ ಯಂತ್ರ (ಕಿಯಾಸ್ಕ್) ಅನ್ನು ಇಂದು ಪೂರ್ವಾಹ್ನ 11.00 ಗಂಟೆಗೆ ಪ್ರವಾಸಿಗರ ಬಳಕೆಗೆ ಅಧಿಕೃತವಾಗಿ ಅನಾವರಣಗೊಳಿಸಲಾಯಿತು.


ಮಾನ್ಯ ಜಿಲ್ಲಾಧಿಕಾರಿಗಳೂ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶ್ರೀ ದರ್ಶನ್ ಎಚ್.ವಿ., ಭಾ.ಆ.ಸೇ., ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಶ್ರೀ ನರ್ವಡೆ ವಿನಾಯಕ್ ಕಾರ್ಭಾರಿ, ಭಾ.ಆ.ಸೇ., ಅವರು ಸಂಯುಕ್ತವಾಗಿ ಕಿಯಾಸ್ಕ್ ಅನ್ನು ಅನಾವರಣಗೊಳಿಸಿದರು.


ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ದರ್ಶನ್ ಎಚ್.ವಿ. ಅವರು, ಈ ಸ್ವಯಂ ಚಾಲಿತ ಟಿಕೆಟ್ ಯಂತ್ರದಿಂದ ಪಿಲಿಕುಳಕ್ಕೆ ಆಗಮಿಸುವ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸರದಿಯಲ್ಲಿ ನಿಲ್ಲದೇ ಸುಲಭವಾಗಿ ಟಿಕೆಟ್ ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.



ಕೆನರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮಂಜುನಾಥ್ ಸಿಂಘೈ ಅವರು ಮಾತನಾಡಿ, ಪ್ರವಾಸಿಗರ ಅನುಕೂಲಕ್ಕಾಗಿ ಇಂತಹ ಎರಡು ಸ್ವಯಂ ಚಾಲಿತ ಟಿಕೆಟ್ ಯಂತ್ರಗಳನ್ನು ಕೆನರಾ ಬ್ಯಾಂಕ್ ವತಿಯಿಂದ ನೀಡಲಾಗಿದೆ. ಇದರಿಂದ ಟಿಕೆಟ್ ಖರೀದಿ ಪ್ರಕ್ರಿಯೆ ಇನ್ನಷ್ಟು ವೇಗವಾಗಲಿದೆ ಎಂದು ಹೇಳಿದರು.


ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಅರುಣ ಕುಮಾರ್ ಶೆಟ್ಟಿ ಎನ್ ಅವರು ಮಾತನಾಡಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜೈವಿಕ ಉದ್ಯಾನವನದ ಸಮರ್ಥ ನಿರ್ವಹಣೆ ಮತ್ತು ಸಮಗ್ರ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಎಲ್.ಡಿ.ಎಂ. ಶ್ರೀಮತಿ ಕವಿತಾ ಶೆಟ್ಟಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿ ಡಾ. ಅಶೋಕ್ ಕೆ.ಆರ್., ಉಪಸಮಿತಿ ಅಧ್ಯಕ್ಷರಾದ ಡಾ. ಶ್ರೀ ನಿಕೇತನ್, ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್, ಕರಕುಶಲ ಗ್ರಾಮದ ಯೋಜನಾಧಿಕಾರಿ ಡಾ. ನಿತಿನ್ ಸೇರಿದಂತೆ ಕೆನರಾ ಬ್ಯಾಂಕ್ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top