ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿ ಒಂದಲ್ಲ ಒಂದು ಸಾಹಿತ್ಯ ಕ್ಷೇತ್ರದಲ್ಲಿ ಅಭಿರುಚಿ ಹೊಂದಿರಬೇಕು. ಕಲೆ ಹಾಗೂ ಸಾಹಿತ್ಯ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನವನ್ನು ರೂಪಿಸುತ್ತದೆ. ಫೇಸ್ಬುಕ್, ರೀಲ್ಸ್ ಮುಂತಾದ ಸಾಮಾಜಿಕ ಜಾಲತಾಣಗಳತ್ತ ಆಕರ್ಷಣೆ ತೋರುವ ಬದಲು ಯಾವುದಾದರೂ ಮೌಲ್ಯಾಧಾರಿತ ಪುಸ್ತಕವನ್ನು ಓದುವುದರಿಂದ ನಮ್ಮ ಜೀವನಕ್ಕೆ ಬೇಕಾದ ಮೌಲ್ಯದ ದಾರಿ ಸಿಗಬಹುದು. ನಮ್ಮ ಆಸಕ್ತಿ ಕ್ಷೇತ್ರ ಯಾವಾಗಲೂ ನಮ್ಮನ್ನು ಉತ್ತಮ ದಾರಿ ಕಡೆ ಸಾಗಿಸುವಂತಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿದ್ಯಾ.ಎಸ್ ನುಡಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಂಘದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್, ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ ಉಪಸ್ಥಿತರಿದ್ದರು. ದ್ವಿತೀಯ ಕಲಾವಿಭಾಗದ ವಿದ್ಯಾರ್ಥಿಗಳಾದ ಶೋಭಿತ ಪ್ರಾರ್ಥಿಸಿ, ಚಿನ್ಮಯ್. ಎಸ್ ಸೇಮಿತ ಸ್ವಾಗತಿಸಿ, ಗೀತಾಂಜಲಿ ವಂದಿಸಿದರು. ವಿದ್ಯಾರ್ಥಿನಿ ಪೃಥ್ವಿ ಕಾರ್ಯಕ್ರಮವನ್ನು ನಿರೂಪಿಸಿದರು . ಈ ಸಂದರ್ಭದಲ್ಲಿ ದ್ವಿತೀಯ ಕಲಾ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


