ಪುತ್ತೂರು: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು 2025-26 ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಶಾ ಪಿ. ಎಸ್ ದ್ವಿತೀಯ ಸ್ಥಾನ ಪಡೆದುಕೊಂಡು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಿಕ್ಷಕರಾದ ರಮೇಶ್ ಶಿರ್ಲಾಲ್ ತರಬೇತಿ ನೀಡಿರುತ್ತಾರೆ. ಸುಳ್ಯದ ಪೈಚಾರು ನಿವಾಸಿ ಸುಕುಮಾರ ಪಿ. ಆರ್ ಮತ್ತು ಪುಷ್ಪ ದಂಪತಿಗಳ ಪುತ್ರಿ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


