ಧರ್ಮಸ್ಥಳ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಪ್ರಕಟಣೆಯಲ್ಲಿ ಅವರು, ಶಾಮನೂರು ಶಿವಶಂಕರಪ್ಪನವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ, ಅವರು ಶಿಕ್ಷಣ, ಆರೋಗ್ಯ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿ ಚಿರಪರಿಚಿತರಾಗಿದ್ದರು. ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅಲ್ಲಿನ ಸರ್ವತೋಮುಖ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿಕೊಂಡಿದ್ದಾರೆ.
ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಎಲ್ಲಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

