ಮಂಗಳೂರು: ಗಿಳಿವಿಂಡು (ರಿ) ಮಂಗಳೂರು ವಿಶ್ವ ವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಎಂ.ಎ., ಎಂ.ಫಿಲ್. ಪಿ.ಎಚ್.ಡಿ. ಯ ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗಳ ಒಕ್ಕೂಟವಾಗಿದ್ದು ಕನ್ನಡ ನಾಡು ನುಡಿ, ಕನ್ನಡದ ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಏಳಿಗೆಗೆ ಸದಾ ಶ್ರಮಿಸುತ್ತಿದೆ.
ಕನ್ನಡ ಮಾಧ್ಯಮ ಶಾಲೆಗಳು ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗಿಳಿವಿಂಡು ಸಂಸ್ಥೆಯು 'ಸಿರಿಗನ್ನಡಂ ಗೆಲ್ಗೆ' ಆರ್ಥಿಕ ನೆರವಿನ ಕಾರ್ಯಕ್ರಮವನ್ನು ರೂಪಿಸಿದೆ. ಇದರ ಉದ್ಘಾಟನಾ ಸಮಾರಂಭ ಡಿಸೆಂಬರ್ 23 ರಂದು ಸುರತ್ಕಲ್ ವಿದ್ಯಾದಾಯಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ 3.00 ಗಂಟೆಗೆ ನೆರವೇರಲಿದೆ.
ಹಿಂದೂ ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ವಿದ್ಯಾದಾಯಿನೀ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾದಾಯಿನೀ ಪ್ರೌಢಶಾಲೆ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಡಳಿತ ಮಂಡಳಿಯಿಂದ ನಿಯೋಜಿತವಾಗಿರುವ 15 ಶಿಕ್ಷಕರಿಗೆ ಒಂದು ವರ್ಷ ಕಾಲ ಮಾಸಿಕವಾಗಿ ರೂ. 1000ದಂತೆ ಹೆಚ್ಚು ವರಿ ವೇತನ ನೀಡಲು ಗಿಳಿವಿಂಡಿನ ಹಳೆ ವಿದ್ಯಾರ್ಥಿಗಳು ವಿದ್ಯಾಭಿಮಾನಿಗಳಿಂದ ಸಂಗ್ರಹಿಸಿರುವ ರೂ. 1,80,000 ಮೊತ್ತವನ್ನು ದೇಣಿಗೆಯಾಗಿ ವಿದ್ಯಾದಾಯಿನೀ ಸಂಘದ ಆಡಳಿತ ಮಂಡಳಿಗೆ ಹಸ್ತಾಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ತ್ವಾರ್ ಹೆಚ್. ವಹಿಸಲಿದ್ದಾರೆ.
ಗಿಳಿವಿಂಡಿನ ಅಧ್ಯಕ್ಷ ಡಾ.ಬಿ. ಶಿವರಾಮ ಶೆಟ್ಟಿ ಮತ್ತು ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಡಾ. ನಾಗಪ್ಪ ಗೌಡ ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


