ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ 'ದೇವಿ ಮಹಾತ್ಮೆ' ಯಕ್ಷಗಾನ ಪ್ರದರ್ಶನ

Upayuktha
0



ಬೆಂಗಳೂರು: ವಿದೇಶಾಂಗ ಇಲಾಖೆಯ ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿ, ಕೋರಮಂಗಲದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರಸಂಗ ಜರುಗಿತು.

ಇಂಡಿಯನ್‌ ಕೌನ್ಸಿಲ್‌ ಅರ್‌ ಕಲ್ಚರಲ್‌ ರಿಲೇಶನ್ಸ್‌ (ICCR) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಲಾದರ್ಶಿನಿ ತಂಡದ ಸದಸ್ಯರು ಯಕ್ಷಗಾನ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಇಂಡಿಯನ್‌ ಕೌನ್ಸಿಲ್‌ ಅರ್‌ ಕಲ್ಚರಲ್‌ ರಿಲೇಶನ್ಸ್‌ ಪ್ರಾದೇಶಿಕ ನಿರ್ದೇಶಕ ಪ್ರದೀಪ್‌ ಕುಮಾರ್‌, ಕರ್ನಾಟಕ ಕಲಾದರ್ಶಿನಿ ತಂಡದ ಮುಖ್ಯಸ್ಥ ಶ್ರೀನಿವಾಸ ಸಾಸ್ತಾನ, ಪ್ರಾದೇಶಿಕ ಪಾಸ್‌ಪೋರ್ಟ್‌ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.


ಕಲಾವಿದರಾಗಿ ಶ್ರೀನಿವಾಸ ಸಾಸ್ತಾನ, ಸುಮಾ ಅನಿಲ್‌ಕುಮಾರ್‌, ಗೌತಮ್‌ ಸಾಸ್ತಾನ, ಧೃತಿ ಎನ್‌. ಅಮ್ಮೆಂಬಳ, ಉಮೇಶ್‌ ಕುಮಾರ್‌, ಕೃಷ್ಣಯ್ಯ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು. ಹಿಮ್ಮೇಳದಲ್ಲಿ ಸುಬ್ರಹ್ಮಣ್ಯ ನಾವುಡ ಭಾಗವತರಾಗಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top