ದಾವಣಗೆರೆ: ಪ್ರೌಢಶಾಲೆಯ ಹಂತ ಮಕ್ಕಳ ಜೀವನದ ಒಂದು ತಿರುವು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಮಕ್ಕಳು ಕಷ್ಟಪಟ್ಟು ಓದ ಬೇಡಿ ಇಷ್ಟ ಪಟ್ಟು ಓದಿದರೆ ವಿದ್ಯಾರ್ಥಿಗಳು ಮುಂದಿನ ಜೀವನದ ಸಾಧನೆಗೆ ಭವ್ಯ ದಿವ್ಯ ಭವಿಷ್ಯಕ್ಕೆ ನಾಂದಿ. ಉತ್ತಮ ಫಲಿತಾಂಶ ತಂದರೆ ಅಕ್ಷರಾಭ್ಯಾಸ ನೀಡಿದ ಗುರುಗಳಿಗೆ, ಓದಿದ ಶಿಕ್ಷಣ ಸಂಸ್ಥೆಗೆ, ಹೆತ್ತ ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ಬಂದಿರುತ್ತದೆ. ಕರ್ನಾಟಕ ಹೃದಯ ಭಾಗದ ದಾವಣಗೆರೆ ಜಿಲ್ಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಥಮ ಸ್ಥಾನಕ್ಕೆ ಬರುವ ಸದುದ್ದೇಶದಿಂದ ದಾವಣಗೆರೆಯ ಕಲಾಕುಂಚದಿಂದ ಪರೀಕ್ಷೆಯ ಮೊದಲೇ ಪೂರ್ವ ಸಿದ್ದತೆಯ ಉಚಿತ ಕಾರ್ಯಾಗಾರ ಮಾಡುತ್ತಿರುವುದು ಶ್ಲಾಘನೀಯ ಎಂದು ದಾವಣಗೆರೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ. ಕೊಟ್ರೇಶ್ ತಮ್ಮ ಅನಿಸಿಕೆ ಹಂಚಿಕೊಂಡರು.
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲಾಕುಂಚ ವಿದ್ಯಾನಗರ ಶಾಖೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ತಾನೇ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಉಚಿತ ಕಾರ್ಯಾಗಾರ ಸಮಾರಂಭವನ್ನು ಜ್ಯೋತಿ ಬೆಳಗುವುದರೊಮದಿಗೆ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಹಿಸಿಕೊಂಡು ಮಕ್ಕಳಿಗೆ ಧೈರ್ಯ ತುಂಬುವ ಉಚಿತ ಕಾರ್ಯಾಗಾರ ನಡೆಸಿಕೊಟ್ಟು ಶಿಕ್ಷಕರ, ಪೋಷಕರ ಅನುಮತಿ ಪಡೆದು ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚದ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು, ಕಲಾಕುಂಚದ ಡಿ.ಸಿ.ಎಂ. ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿನವಪ್ಪ, ಕಲಾಕುಂಚದ ಎಲೆಬೇತೂರು ಶಾಖೆಯ ಅಧ್ಯಕ್ಷರಾದ ಡಾ|| ನಿರ್ಮಲಾ ವಿಶ್ವನಾಥ್ ಕುಲಕರ್ಣಿ ಉಪಸ್ಥಿತರಿದ್ದರು.
ಕುಮಾರಿ ಭಾನುಶ್ರೀಯವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭಕ್ಕೆ ಕಲಾಕುಂಚದ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು ಸ್ವಾಗತಿಸಿ ಪ್ರಾಸ್ತಾವನೆಯೊಂದಿಗೆ ಮಾತನಾಡಿದರು. ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


