ಡಿಡಿಆರ್‍‌ಸಿ ವತಿಯಿಂದ ವಿಕಲಚೇತನರ ಸಪ್ತಾಹ

Upayuktha
0


ಉಡುಪಿ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ರೆಡ್ ಕ್ರಾಸ್ ಘಟಕ ಪ್ರಾಯೋಜಿತ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ನವೆಂಬರ್ 25 ರಿಂದ ಡಿಸೆಂಬರ್ 1 ರವರೆಗೆ ವಿವಿಧ ತಾಲೂಕುಗಳಲ್ಲಿ ವಿಕಲಚೇತನರ ಸಪ್ತಾಹವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮವು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯೊಂದಿಗೆ ಚಾಲನೆಗೊಂಡು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರೋಪ ಸಮಾರಂಭದೊಂದಿಗೆ ಕೊನೆಗೊಂಡಿತು.


ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ 21 ಬಗೆಯ ವಿಕಲತೆ, ವಿಕಲಚೇತನರಿಗೆ ದೊರೆಯುವ ಸರಕಾರಿ ಸೌಲಭ್ಯಗಳು, ವಿಕಲಚೇತನರ ಆರೈಕೆ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಡಿಡಿಆರ್‍‌ಸಿ ನೋಡಲ್ ಅಧಿಕಾರಿ ಜಯಶ್ರೀ, ಮನೋಶಾಸ್ತ್ರಜ್ಞೆ ವೈಶಾಖ ವಾರಂಬಳ್ಳಿ, ಫಿಸಿಯೋಥೆರಪಿಸ್ಟ್ ಡಾ. ಶ್ರೇಯಾ, ಪ್ರಾಸ್ಥೆಟಿಕ್ ಮತ್ತು ಆರ್ಥೋಟಿಸ್ಟ್ ಇಂಜಿನಿಯರ್ ಜೆನಿಸ್ ಡಿಸೋಜ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ರಾಜ್ಯ ರೆಡ್‍ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಉಪಸ್ಥಿತರಿದ್ದರು.


ಸಪ್ತಾಹದ ಅಂಗವಾಗಿ ಕುಂದಾಪುರ ತಾಲೂಕು ಪಂಚಾಯತ್, ಬ್ರಹ್ಮಾವರದ ಎಸ್ ಎಮ್ ಎಸ್ ಕಾಲೇಜು, ಕಾರ್ಕಳ ತಾಲೂಕು ಪಂಚಾಯತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ತಾಲೂಕು ಪಂಚಾಯತ್ ಬೈಂದೂರು ಇಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗಿತ್ತು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top