ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ- ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪ್ರಥಮ

Upayuktha
0


ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿನಿಯಮಿತ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಎಸ್.ಡಿ.ಸಿ.ಸಿ ಬ್ಯಾಂಕ್ ಕಟ್ಟಡ ಕೊಡಿಯಲ್ ಬೈಲ್,  ಮಂಗಳೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ವಿವೇಕಾನಂದ  ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ. ಎ ಭಾಗವಹಿಸಿರುತ್ತಾರೆ.ಇವರು “ಸಹಕಾರ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ” ಎಂಬ ವಿಷಯದ ಪರವಾಗಿ ಮಾತನಾಡಿ ಪ್ರಥಮ ಸ್ಥಾನವನ್ನು ಪಡೆದಿರುವರು. ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. 


ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ - ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top