ಅಶೋಕ್ ಪೈ ರವರ ಜನ್ಮದಿನ: ನೂತನ ವಿದ್ಯಾರ್ಥಿಗಳಿಗೆ ಪ್ರೇರಣೆ

Upayuktha
0


ಶಿವಮೊಗ್ಗ: ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜು ಮತ್ತು ಮಾನಸ ವೃತ್ತಿಪರ ತರಬೇತಿ ಕೇಂದ್ರ ಇವರ ಆಶ್ರಯದಲ್ಲಿ ಬಿ.ಎಸ್ಸಿ. ನರ್ಸಿಂಗ್ ಹಾಗೂ ಎನ್‌ಸಿವಿಆರ್‌ಟಿ ಕೋರ್ಸ್‌ಗಳ 2025 ರಲ್ಲಿ ಪ್ರವೇಶಾತಿ ಪಡೆದ ನೂತನ ವಿದ್ಯಾರ್ಥಿಗಳಿಗಾಗಿ ಪ್ರೇರಣಾ (Freshers’ Party) ಕಾರ್ಯಕ್ರಮವನ್ನು ಉತ್ಸಾಹ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಹೊಸ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಅವರಿಗೆ ಶೈಕ್ಷಣಿಕ ವಾತಾವರಣದೊಂದಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದಾಗಿತ್ತು.


ಈ ವಿಶೇಷ ಸಂದರ್ಭದಲ್ಲಿ ಕಾಲೇಜಿನ ಸ್ಥಾಪಕ ದಿವಂಗತ ಡಾ|| ಅಶೋಕ್ ಪೈ ಅವರ ಜನ್ಮದಿನವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಅವರ ಅಮೂಲ್ಯ ಸೇವೆ, ಮಾನಸಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿ ನಮನ ಮತ್ತು ಪುಷ್ಪ ನಮನವನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ರಾಜೇಂದ್ರ ಚೆನ್ನಿಯವರು ಅಶೋಕ್ ಪೈ ಅವರ ಸಾಧನೆ, ವ್ಯಕ್ತಿತ್ವ ಅವರ ಕೊಡುಗೆಗಳ ಬಗ್ಗೆ ಮಾತನಾಡಿದರು. ಅಲ್ಲದೆ ಮಕ್ಕಳಿಗೆ ಶಿಕ್ಷಣದ ಗುರಿಯ ಜೊತೆಗೆ ಅಶೋಕ್ ಪೈ  ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.


ಡಾ. ಅರ್ಚನಾ ಭಟ್‌ರವರು ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿದ ನಂತರ ಅವರ ವೃತ್ತಿಯು ಮಾನವೀಯ ಮೌಲ್ಯಧಾರಿತ ವಾಗಿರುತ್ತದೆ ಎಂದು ಶ್ಲಾಘಿಸಿದರು. ಜೊತೆಯಲ್ಲಿ ರೋಗಿಗಳ ಕುಟುಂಬದವರಿಗೆ ಮತ್ತು ರೋಗಿಗಳ ಮರುಜೀವನಕ್ಕೆ ಆಸರೆಯಾಗುತ್ತಾರೆ ಎಂದು ಪ್ರೇರಣೆ ನೀಡಿದರು.


ಈ ಕಾರ್ಯಕ್ರಮದಲ್ಲಿ ಆಡಳಿತ ನಿರ್ವಾಹಕರಾದ ಪ್ರೊ. ರಾಮಚಂದ್ರ ಬಾಳಿಗ, ನರ್ಸಿಂಗ್ ವಿಭಾಗದ ಪ್ರಾಂಶುಪಾಲರಾದ ಪ್ರೊ. ಮಲ್ಲಿಕಾರ್ಜುನ್ ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top