ಮಂಗಳೂರು: ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಜಿಲ್ಲಾಡಳಿತ ಗೌರವ

Upayuktha
0


ಮಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್  ಡಾ.ಬಿ.ಆರ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ  ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಶನಿವಾರ ಗೌರವ ಸಲ್ಲಿಸಲಾಯಿತು.


ನಗರದ ಪುರಭವನ ಮುಂಭಾಗ ಇರುವ  ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ  ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್, ಪೋಲೀಸ್ ಆಯುಕ್ತ  ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,  ದೇಶವು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣವಾಗಲು ಡಾ.ಬಿ.ಆರ್ ಅಂಬೇಡ್ಕರ್  ಅವರ ಕೊಡುಗೆ ಅದ್ವಿತೀಯ. ಪ್ರತಿಯೊಬ್ಬ ನಾಗರೀಕರಿಗೂ ಜೀವಿಸಲು ಅಗತ್ಯವಾದ ಸ್ವಾತಂತ್ರ್ಯ ಮತ್ತು ಹಕ್ಕು ಒದಗಿಸಲು ಅವರು ಕಾರಣಕರ್ತರಾಗಿದ್ದಾರೆ. ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿದರೆ ಉತ್ತಮ ನಾಗರಿಕರಾಗಬಹುದು ಎಂದರು.


ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ  ಡಾ.ಬಿ.ಎಸ್ ಹೇಮಲತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ,  ಜಿಲ್ಲಾ ವಾರ್ತಾಧಿಕಾರಿ  ಬಿ.ಎ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top