ಡಾ.ಎಂ.ಎಸ್. ದುರ್ಗಾಪ್ರವೀಣ್‌ಗೆ ಪ್ರತಿಷ್ಟಿತ ಎಚ್.ಎನ್. ಪ್ರಶಸ್ತಿ-2025

Upayuktha
0


ಕುಪ್ಪಂ: ಆಂಧ್ರಪ್ರದೇಶದ ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂನ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಅಧ್ಯಾಪಕ ಡಾ.ಎಂ.ಎಸ್. ದುರ್ಗಾಪ್ರವೀಣ್ ಇವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ಪ್ರತಿಷ್ಟಿತ ‘ಎಚ್.ಎನ್.ಪ್ರಶಸ್ತಿ-2025’ಗೆ ಭಾಜನರಾಗಿದ್ದಾರೆ. ಇದು ಖ್ಯಾತ ಶಿಕ್ಷಣ ತಜ್ಞ, ವಿಚಾರವಾದಿ ಎಚ್. ನರಸಿಂಹಯ್ಯ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಪ್ರಶಸ್ತಿಯಾಗಿದೆ.


ಮೌಲಿಕ ಸಂಶೋಧನಾ ಕೃತಿಗಳನ್ನು ನೀಡಿರುವ ಡಾ. ದುರ್ಗಾಪ್ರವೀಣ್ ಅವರು ಹದಿನೆಂಟು ವರ್ಷಗಳ ಬೋಧನಾನುಭವ ಹೊಂದಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುತ್ತಾರೆ. ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ಯಾದಗಿರಿಯಲ್ಲಿ ಡಿ.28ರಿಂದ 30ರವರೆಗೆ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ, ಇಸ್ರೊ, ಡಿ.ಆರ್.ಡಿ.ಓ, ನೆಹರೂ ತಾರಾಲಯ ಮೊದಲಾದ ಸಂಸ್ಥೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಯೋಜಿಸಿರುವ ಐದನೇ ವೈಜ್ಞಾನಿಕ ಸಮ್ಮೇಳನದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.


ಅನೇಕ ಗಣ್ಯ ಸಂಪನ್ಮೂಲ ವ್ಯಕ್ತಿಗಳು, ಸಂಶೋಧಕರು, ವಿಜ್ಞಾನಿಗಳು, ಸಚಿವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top