ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ ಉದ್ಘಾಟನೆ

Upayuktha
0


ಉಡುಪಿ: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತಟ್ರಸ್ಟ್ ಉಡುಪಿ ಜಿಲ್ಲೆಇವರ ವತಿಯಿಂದ ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ ಇವರ  ಸಹಯೋಗದಲ್ಲಿ ನಡೆಯುವ ಮೂರು ತಿಂಗಳ “ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿಯ” ಉದ್ಘಾಟನಾ ಸಮಾರಂಭವು ಬುಧವಾರ ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ನ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.  


ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ ಉದ್ಘಾಟಿಸಿದರು.


ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡೇತರರಿಗೆ ಕನ್ನಡ ಕಲಿಕಾ ತರಬೇತಿಯು ಕನ್ನಡ ಕಲಿಕಾ ಆಸ್ತಕರಿಗೆ ಉತ್ತಮ ಅವಕಾಶವಾಗಿದ್ದು, ಪ್ರತಿಯೊಬ್ಬರು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.


ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹರಿಕುಮಾರ್ ಎ, ಮುಖ್ಯ ಹಣಕಾಸು ಅಧಿಕಾರಿ ಶಂಕರ್ ನಟರಾಜ್, ಉಪಪ್ರಧಾನ ವ್ಯವಸ್ಥಾಪಕ ಎಂ ಅಂಬಲವನನ್, ಡಾ.ಜಿ ಶಂಕರ್ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ,  ಶಿಕ್ಷಕಿ ದೀಪಿಕಾ ಉಪಸ್ಥಿತರಿದ್ದರು. 


ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ರೇಣುಕಾ ನಿರೂಪಿಸಿ ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top