ಐತಿಹಾಸಿಕ ಕಾದಂಬರಿ "ಪ್ರತಿಷ್ಠೆ", ಪತ್ತೇದಾರಿ ಕಾದಂಬರಿ "ವಿಷ ವರ್ತುಲ"
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ "ಪ್ರತಿಷ್ಠೆ" ಹಾಗೂ ಮೊದಲ ಪತ್ತೇದಾರಿ ಕಾದಂಬರಿ "ವಿಷ ವರ್ತುಲ" ಬಿಡುಗಡೆ ಸಮಾರಂಭಗಳು ಭಾನುವಾರ ನಡೆದವು.
"ಪ್ರತಿಷ್ಠೆ ಕಾದಂಬರಿಯನ್ನು ಭಾನುವಾರ (ಡಿ.7) ವೇಣೂರಿನ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. "ವಿಷ ವರ್ತುಲ" ಕಾದಂಬರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
'ಪ್ರತಿಷ್ಠೆ' ಕಾದಂಬರಿಯು ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡಿದೆ.
ಎರಡೂ ಕಾದಂಬರಿಗಳಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿದ್ದಾರೆ.
ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು, ಅವರ ಮಕ್ಕಳಾದ ಅಭಿಗಮ್ಯ ರಾಮ್, ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.
ಈ ಎರಡೂ ಕಾದಂಬರಿಗಳನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

