ಮಂಗಳೂರು: ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಮಂಗಳೂರು, ಎನ್‌ಎಸ್‌ಎಸ್ ಘಟಕ ಮತ್ತು ವಿದ್ಯಾರ್ಥಿ ವೇದಿಕೆಯ ವತಿಯಿಂದ, ಪಾರಿವರ್ತನ ಟ್ರಸ್ಟ್, ಬೆಂಗಳೂರು ಇವರ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆಯನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಶಾಖೆಯ ಅಧ್ಯಕ್ಷರಾದ ಸಿ.ಎ. ಶಾಂತರಾಮ್ ಶೆಟ್ಟಿ ಅವರು ಉದ್ಘಾಟಿಸಿ, ಡ್ರಗ್ಸ್ ವಿರುದ್ಧ ಸಮೂಹ ಜವಾಬ್ದಾರಿಯ ಅಗತ್ಯವನ್ನು ಒತ್ತಿ ಹೇಳಿದರು. ಬಳಿಕ ಡಾ. ಮುರಳಿ ಮೋಹನ್ ಚುಂತಾರು, ಕಾರ್ಯಕಾರಿ ಸಮಿತಿ ಸದಸ್ಯರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಂಗಳೂರು, ಅವರು ಡ್ರಗ್ಸ್ ವ್ಯಸನದ ದುಷ್ಪರಿಣಾಮಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ರಾಘವೇಂದ್ರ ಹೊಳ್ಳ, ಅಧ್ಯಕ್ಷರು, ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಶಿಕ್ಷಣ ಸಂಸ್ಥೆಗಳು ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು. ಡಾ. ಮಾಲಿನಿ ಎನ್. ಹೆಬ್ಬಾರ್, ಪ್ರಾಂಶುಪಾಲರು, ವಿದ್ಯಾರ್ಥಿಗಳಿಗೆ ಡ್ರಗ್ಸ್ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಥದ ಬಳಿಗೆ ತೆರಳಿ ಭಾರತ ಮಾತೆಗೆ ಪುಷ್ಪಾರ್ಪಣೆ ಸಲ್ಲಿಸಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸಂಯೋಜಕಿ ವಿದ್ಯಾಲಕ್ಷ್ಮಿ ಪಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಹೇಮಂತ್ ವಂದನಾರ್ಪಣೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


