ಕಣಚೂರ್ ಆಯುರ್ವೇದ ಕಾಲೇಜು ಆಸ್ಪತ್ರೆಯಿಂದ ಸುಜ್ಲಾನ್ ಕಾಲೋನಿಯಲ್ಲಿ ಉಚಿತ ವೈದ್ಯಕೀಯ ಶಿಬಿರ

Upayuktha
0


ಪಡುಬಿದ್ರಿ: ಬೆಂಗಳೂರಿನ ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರಿನ ಕಣಚೂರು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಇವರ ಸಹಭಾಗಿತ್ವದಲ್ಲಿ ಶನಿವಾರ ಇಲ್ಲಿನ ಸುಸ್ಲಾನ್ ಕಾಲೋನಿಯಲ್ಲಿ "ಆರೋಗ್ಯವೇ ಭಾಗ್ಯ" ಉಚಿತ ವೈದ್ಯಕೀಯ ಶಿಬಿರ ನಡೆಯಿತು.


ವೈದ್ಯಕೀಯ ಶಿಬಿರವನ್ನು ದೀಪ ಬೆಳಗಿ ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಶಶಿಕಾಂತ್ ಪಡುಬಿದ್ರಿ ಮಾತನಾಡಿ, ಇಂತಹ ವೈದ್ಯಕೀಯ ಶಿಬಿರಗಳಿಂದ ಕಾಯಿಲೆಗಳ ಪತ್ತೆ ಆಗುವುದರಿಂದ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಾಯಕ ಆಗುತ್ತದೆ. ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ಎಸ್ ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ವಹಿಸಿದ್ದರು.


ಕಣಚೂರು ಆಯುರ್ವೇದ ಕಾಲೇಜು ವೈದ್ಯಕೀಯ ಸಲಹೆಗಾರ ಡಾ. ಸುರೇಶ್ ನೆಗಳಗುಳಿ ಅವರು ಮಾತನಾಡುತ್ತಾ ಹಣ ಕುಟುಂಬ ಎಲ್ಲವೂ ಇದ್ದರೂ ಅರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂದರು.



ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಾರ್ತಿಕೇಯ ಪ್ರಸಾದ್ ಅವರು ಮಾತನಾಡಿ, ಆಯುರ್ವೇದ ಚಿಕಿತ್ಸೆಯು ಕಾಯಿಲೆಯನ್ನು ಬುಡ ಸಹಿತ ಕಿತ್ತೊಗೆಯುತ್ತದೆ. ನಮ್ಮ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಪಂಚಕರ್ಮ ಮುಂತಾದ ವ್ಯವಸ್ಥೆ ಇದ್ದು ಅನುಕೂಲ ದರದಲ್ಲಿ ಚಿಕಿತ್ಸೆ ನೀಡುತ್ತೇವೆ ಎಂದರು.


ಸಹಾಯಕ ಪ್ರಾಧ್ಯಾಪಕ ಡಾ. ಶ್ರೀರಾಮ್, ಕಣಚೂರು ಆಸ್ಪತ್ರೆ, ಸಮಾಜ ಸೇವಕ ರಂಜನ್ ಕುಮಾರ್, ಸುಜ್ಲಾನ್ ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಮಾಲ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷೆ ಸೌಮ್ಯ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅನುಪಮಾ ರಾವ್, ನಿರ್ದೇಶಕಿ ಶಿಲ್ಪಾ ಜೋಸೆಫ್ ಮತ್ತಿತರರು ಉಪಸ್ಥಿತರಿದ್ದರು. 


ಶರಣ್ಯ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು. ಡಾ ನೀತು, ಡಾ ನಿಯಾನ ಮತ್ತು ಸಿಬಂದಿಗಳೊಡಗೂಡಿ ಬಳಿಕ ನಡೆದ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಮಂದಿ ವೈದ್ಯಕೀಯ ಸಲಹೆ ಮತ್ತು ಔಷಧಿ ಪಡೆದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top