ಕಾಪು: ನವೆಂಬರ್ 4ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ವಾರ್ಷಿಕ ಕ್ರೀಡಾಕೂಟ ಜರಗಿತು, ಕ್ರೀಡಾಕೂಟದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ಇವರು ವಹಿಸಿದ್ದರು.
ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಉಮೆಶ್ ಇವರು ಕ್ರೀಡಾಕೂಟದ ಉದ್ಘಾಟನೆಯನ್ನುನಡೆಸಿಕೊಟ್ಟರು, ಇವರು ಮಾತಾನಾಡಿ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕಾದರೆ ಕ್ರೀಡೆ ಅತಿ ಮುಖ್ಯವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಎಂದು ಕರೆ ನೀಡಿದರು, ಕಾರ್ಯಕ್ರಮದ ಅತಿಥಿಯಾಗಿ ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಶ್ರೀಮತಿ ಜ್ಯೋತಿ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಸಂಚಾಲಕರಾದ ದೀಪಿಕಾ ಸುವರ್ಣ, ಐಕ್ಯೂಎಸಿ ಸಂಚಾಲಕರಾದ ಡಾ. ರೋಶ್ನಿ ಯಶವಂತ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ವಿರೇಶ್ ಇವರು ಪ್ರತಿಜ್ಞಾವಿಧಿ ಬೋದಿಸಿದರು, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸವಿತಾ ಎಲ್ಲರನ್ನು ಸ್ವಾಗತಿಸಿದರು, ಕು. ಅಶ್ವಿನಿ ವಂದಿಸಿ, ಕು.ರಿಶಿಕಾ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


