ವಿದ್ಯಾರ್ಥಿಗಳಲ್ಲಿ ಮಾನವೀಯತೆಯ ಗುಣಗಳನ್ನು ಬೆಳೆಸಬೇಕು: ಗಂಗಾಧರ ಆಳ್ವ

Upayuktha
0


ಬಂಟ್ವಾಳ: ಇಂದಿನ ವಿದ್ಯಾರ್ಥಿಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸುತ್ತಿದ್ದರೂ ಮಾನವೀಯತೆಯ ಗುಣಗಳು ಕಡಿಮೆಯಾಗುತ್ತಿವೆ. ಮೊಬೈಲ್ ಬಳಕೆಯಿಂದ ನಿರ್ಧಿಷ್ಟ ವಿಷಯಗಳ ಕಲಿಕೆಯ ಮೇಲೆ ಏಕಾಗ್ರತೆ ಇಲ್ಲದಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಂಗಾಧರ ಆಳ್ವ ಹೇಳಿದರು.


ಅವರು ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ವಿವೇಕ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ವಿದ್ಯಾರ್ಥಿಗಾಗಿ ಪುಸ್ತಕ ಆಧಾರಿತ ಲಿಖಿತ ಪರೀಕ್ಷೆಯ ಪುಸ್ತಕ ವಿತರಣೆ ಮತ್ತು ಮೌಲ್ಯ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಲಯನ್ಸ್ ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. 


ವೇದಿಕೆಯಲ್ಲಿ ವಿದ್ಯಾಭಿವರ್ಧಕ ಸಂಘ ಮಾಣಿ ಇದರ ಅಧ್ಯಕ್ಷ ಕಿರಣ್ ಹೆಗ್ಡೆ, ಸಂಚಾಲಕ ಇಬ್ರಾಹಿಂ ಕೆ., ಮುಖ್ಯೋಪಾಧ್ಯಾಯ ಚೆನ್ನಪ್ಪ ಗೌಡ, ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಗಂಗಾಧರ ರೈ, ಕಾರ್ಯದರ್ಶಿ ರತ್ನಾಕರ ರೈ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಮ್ ಕಿಶನ್, ಸಚ್ಚಿದಾನಂದ ರೈ ಮೊದಲಾದವರು ಉಪಸ್ಥಿತರಿದ್ದರು.


ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮಾಣಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮ ಸಂಯೋಜಕ ಜಯಾನಂದ ಪೆರಾಜೆ ಸ್ವಾಗತಿಸಿದರು. ವಿವೇಕ ವಂಶಿಯ ಬಗ್ಗೆ ರೇಖಾ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯರಾಮ ಕಾಂಚನ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top