ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯೋಧರೊಂದಿಗೆ ಸಂವಾದ

Upayuktha
0


ಪುತ್ತೂರು: ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸ್ವದೇಶ ಜಾಗರಣ ಸೈಕ್ಲಿಂಗ್ ಅಭಿಯಾನ ಪುತ್ತೂರಿಗೆ ಆಗಮಿಸಿತು.ಪುತ್ತೂರು ಮುಖ್ಯ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆದ ನಂತರ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಶೇಷ ಸಂವಾದ ಕಾರ್ಯಕ್ರಮವು ನಡೆಯಿತು. 


ಈ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿಗಳಾದ ಬ್ರಿಗೇಡಿಯರ್ ರವಿ ಮುನಿಸ್ವಾಮಿ, ಬ್ರಿಗೇಡಿಯರ್ ಐ. ಎನ್. ರೈ, ಮೇಜರ್ ಜನರಲ್ ಎ. ವಿ. ಮೋಹನ್, ಮೇಜರ್ ಜನರಲ್ ಶರತ್ ಭಂಡಾರಿ ಹಾಗೂ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ ಎಂ ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದ ಯೋಧರು ಹಾಗೂ ಹಿರಿಯರು ಈ ಸಂದರ್ಭದಲ್ಲಿ ತಮ್ಮ ಜೇವನಾನುಭವಗಳನ್ನು ಹಂಚಿಕೊಂಡರು.ಸಂವಾದ ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರಾದ ಪ್ರಜ್ವಲ್ ನಡೆಸಿಕೊಟ್ಟರು. ಈ ಸಂವಾದ ಕಾರ್ಯಕ್ರಮದಲ್ಲಿ ನೆಹರು ನಗರದ ವಿವೇಕಾನಂದ ಆವರಣದ ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ರವಿನಾರಾಯಣ, ಆಡಳಿತ ಮಂಡಳಿಯ ಸದಸ್ಯರಾದ ಕೃಷ್ಣ ಮೋಹನ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಹಾಗೂ ಪುತ್ತೂರಿನ ಸಾರ್ವಜನಿಕರು ಭಾಗವಹಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಅಕ್ಷತಾ ಜಿ. ಕಾರ್ಯಕ್ರಮವನ್ನು ನಿರ್ವಹಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top