ಜನತಾ ವಿದ್ಯಾಸಂಸ್ಥೆಗಳು ಅಡ್ಯನಡ್ಕ: ಡಿ. 27ರಂದು ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ

Upayuktha
0



ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿಸೆಂಬರ್ 27ರಂದು ಶನಿವಾರ ನಡೆಯಲಿದೆ.


ಜನತಾ ಪದವಿಪೂರ್ವ ವಿದ್ಯಾಲಯದ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಸ್ಥಾಪಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಸಂಸ್ಥಾಪಕರಾದ ಸಾಯ ಕೃಷ್ಣ ಭಟ್ ಹಾಗೂ ವಾರಣಾಶಿ ಸುಬ್ರಾಯ ಭಟ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಮತ್ತು ವಿವಿಧ ದತ್ತಿನಿಧಿ ಬಹುಮಾನ ವಿತರಣೆ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣೆ ಜರಗಲಿದೆ.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ವಹಿಸುವರು. ರಾಮ ನಾಯ್ಕ್, ಜನರಲ್ ಮ್ಯಾನೇಜರ್, ಕೆನರಾ ಬ್ಯಾಂಕ್ ಮಣಿಪಾಲ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು ಉಪಸ್ಥಿತರಿರುವರು.


ಪ್ರತಿಭಾ ಪುರಸ್ಕಾರದ ಬಳಿಕ ದಿವಂಗತ ಪಾರ್ವತಿ ಅಮ್ಮನವರ ಮತ್ತು ಮಗ ದಿವಂಗತ ನಾರಾಯಣ ಜೋಶಿ ಚವರ್ಕಾಡು ಅವರ ಸ್ಮರಣಾರ್ಥ ಸರೋಜಾ ನಾರಾಯಣ ಜೋಶಿ ಅವರಿಂದ ಸಿಹಿ ತಿಂಡಿ ವಿತರಣೆ ನಡೆಯಲಿದೆ.


Post a Comment

0 Comments
Post a Comment (0)
To Top