ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಉದ್ಯೋಗ ಕೋಶ ಅನುಷ್ಠಾನ ಕಾರ್ಯಾಗಾರ

Upayuktha
0


ಬಳ್ಳಾರಿ: ವಿದ್ಯಾರ್ಥಿಗಳು ತಂತ್ರಜ್ಞಾನದ ಸರಿಯಾದ ಬಳಕೆಯಿಂದ ಜೀವನ ರೂಪಿಸಿಕೊಳ್ಳುವ ಶಿಲ್ಪಿಯಾಗಬಹುದು ಎಂದು ಬೆಂಗಳೂರು ಇಂಡಿಯಾ 4 ಐಎಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಸಿ ಶ್ರೀನಿವಾಸ ಹೇಳಿದರು.


ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ವಿವಿ ಅಧೀನದ ಕಾಲೇಜುಗಳ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡು ದಿನಗಳ ‘ಉದ್ಯೋಗ ಮಹತ್ವ ಹಾಗೂ ಉದ್ಯೋಗ ಕೋಶದ ಅನುಷ್ಠಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕೋಟ್ಯಾಂತರ ಉದ್ಯೋಗ ಆಕಾಂಕ್ಷಿಗಳು ಉದ್ಯೋಗಕ್ಕಾಗಿ ಹಂಬಲಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕನ್ನಡಿಗರೇ ಸ್ಥಾಪಿಸಿರುವ ಸಂಸ್ಥೆಯಲ್ಲಿ ನೂರಾರು ವಿದ್ಯಾರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ಯಶಸ್ವಿಯಾಗುತ್ತಿದ್ದಾರೆ ಎಂದರು.


ನಿವೃತ್ತ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ, ಪ್ಲೇಸ್‌ಮೆಂಟ್ ಸೆಲ್‌ನ ರಾಜ್ಯ ನೋಡಲ್ ಅಧಿಕಾರಿ ಪ್ರೊ.ಎ ನಾರಾಯಣ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸದ ಕೊರತೆಯು ಹೆಚ್ಚಾಗುತ್ತಿದೆ. ತಾತ್ಸಾರ, ಕೀಳರಿಮೆಯನ್ನು ತೆಗೆದು ಹಾಕುವ ಮೂಲಕ ತಮ್ಮಲ್ಲಿರುವ ನೈಪುಣ್ಯತೆ ಬಳಸಿಕೊಳ್ಳಬೇಕು. ಉದ್ಯಮಶೀಲತೆ, ನಾವೀನ್ಯತೆ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ವಿವಿಯಲ್ಲಿ ಆಯೋಜಿಸಿದ್ದೇವೆ. ಮುಂಬರುವ ದಿನಗಳಲ್ಲಿ ಉದ್ಯೋಗ ಭರವಸೆ ಕೋಶದ ಮೂಲಕ ವಿದ್ಯಾರ್ಥಿಗಳಿಗೆ ಪ್ಲೇಸ್‌ಮೆಂಟ್ ದೊರಕಿಸುವ ಕಾರ್ಯ ಆಗಲಿದೆ ಎಂದು ಹೇಳಿದರು.


ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಪರೀಕ್ಷೆಗಳಿಗೆ ತಯಾರಿ ಹಾಗೂ ಉದ್ಯೋಗ ಕುರಿತು ಮಾರ್ಗದರ್ಶನದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ಉದ್ಯೋಗಾವಕಾಶಗಳನ್ನು ಪಡೆಯಲು ವಿಷಯ ತಜ್ಞರ ಜೊತೆ ಸಂವಾದ, ಉಪನ್ಯಾಸ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸುವ ಮೂಲಕ ಪ್ರಯೋಜನ ಪಡೆಯಬೇಕು ಎಂದರು.


ಕಾರ್ಯಕ್ರಮದಲ್ಲಿ ಇಂಡಿಯಾ 4 ಐಎಎಸ್ ಸಂಸ್ಥೆಯ ಸಿಬ್ಬಂದಿ ನಾಗರಾಜು, ವಿವಿಯ ಉದ್ಯೋಗ ಕೋಶದ ಸಂಯೋಜಕರಾದ ಡಾ.ಸುನೀಲ್ ಉಪಸ್ಥಿತರಿದ್ದರು.


ಎರಡು ದಿನಗಳ ಕಾರ್ಯಾಗಾರದಲ್ಲಿ ವಿವಿಯ ಪ್ರಾಧ್ಯಾಪಕರುಗಳು, ಕಾಲೇಜುಗಳ ಉಪನ್ಯಾಸಕರುಗಳು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top