ಕಿನ್ನಿಗೋಳಿ, ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಯ ಭರ್ಜರಿ ಗೆಲುವು

Upayuktha
0

ಅಭಿವೃದ್ಧಿ- ಹಿಂದುತ್ವ- ಮೋದಿ ಜನಪರ ಆಡಳಿತದ ಪರವಾದ ಜನಾದೇಶ: ಸಂಸದ ಕ್ಯಾ. ಚೌಟ





ಮಂಗಳೂರು: ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಗೆಲುವು ದಾಖಲಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆ, ಜನಪರ ಕಾಳಜಿ ಹಾಗೂ ಹಿಂದುತ್ವದ ವಿಚಾರಧಾರೆಯ ಪರವಾಗಿ ಸಂದ ಜಯ. ಈ ಹಿನ್ನಲೆಯಲ್ಲಿ ಮತದಾರರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.


ಚುನಾವಣಾ ಫಲಿತಾಂಶದ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದರು, "ಈ ಫಲಿತಾಂಶವು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂ ವಿರೋಧಿ ನೀತಿಗಳಿಗೆ ಜನತೆ ನೀಡಿದ ಸ್ಪಷ್ಟವಾದ ಉತ್ತರವಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಹತ್ತಿರದಿಂದ ಕಂಡ ಜನತೆ ಬಿಜೆಪಿಯ ಸಿದ್ಧಾಂತಕ್ಕೆ ಮನ್ನಣೆ ನೀಡಿದ್ದಾರೆ. ಆ ಮೂಲಕ ಸ್ಥಳೀಯ ಆಡಳಿತದಿಂದ ಹಿಡಿದು, ರಾಜ್ಯ- ರಾಷ್ಟ್ರ ಮಟ್ಟದಲ್ಲೂ ಬಿಜೆಪಿಗೆ ಅಭೂತಪೂರ್ವ ಜನಾದೇಶ ವ್ಯಕ್ತವಾಗುತ್ತಿರುವುದು ಪ್ರಧಾನಿ ಮೋದಿಯವರ ವಿಕಸಿತ ಭಾರತಕ್ಕೆ ಸಂಕಲ್ಪಕ್ಕೆ ಮತ್ತಷ್ಟು ಸ್ಪೂರ್ತಿ ತುಂಬಿದೆ ಎಂದು ಹೇಳಿದ್ದಾರೆ. 


ಈ ಗೆಲುವಿನ ಹಿಂದೆ ಅಹರ್ನಿಶಿಯಾಗಿ ಶ್ರಮಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ, ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದ ಶಾಸಕ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಎಲ್ಲಾ ಪದಾಧಿಕಾರಿಗಳು ಹಾಗೂ ಪಾರ್ಟಿಯ ಎಲ್ಲಾ ಪ್ರಮುಖರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top