ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಪ್ರತಿಭಾ ಕಾರಂಜಿ

Upayuktha
0


ಕನ್ಯಾನ: ಇಲ್ಲಿನ ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ಬಲ್ ರಹಿಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯ ಮೊಯಿದಿನ್ ಕುಂಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಜಲಜಾಕ್ಷಿ, ಜಿಲ್ಲಾ ಪಂಚಾಯತ್ ಸದಸ್ಯ ಯಂ. ಯಸ್. ಮಹಮ್ಮದ್, ಶ್ರೀಪತಿ ಭಟ್ ಹಾಗೂ ಮಂಡ್ಯೂರು ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಂಗನವಾಡಿಯ ಹಳೆ ವಿದ್ಯಾರ್ಥಿಗಳು ಗ್ಯಾಸ್ ಸ್ಟೌ ಹಾಗೂ ಕುರ್ಚಿಗಳನ್ನು ಉಡುಗೊರೆಯಾಗಿ ಸಂಸ್ಥೆಗೆ ನೀಡಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೆಸಿಮ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ವನಿತಾ ನಿರೂಪಿಸಿ, ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top