ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ವತಿಯಿಂದ ಕಾಟಿಪಳ್ಳ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ವಠಾರದಲ್ಲಿ ಆಯೋಜಿಸಿದ್ದ ಸುರತ್ಕಲ್ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ವತಿಯಿಂದ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರ ಅವರ ನೇತೃತ್ವದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ಹಿರಿಯ ಗಾಯಕರಾದ ಮುರಳೀಧರ ಕಾಮತ್, ರವೀಂದ್ರ ಪ್ರಭು, ರಾಮ್ ಕುಮಾರ್, ಮಿಥುನ್ ರಾಜ್, ಉದಯ ಕುಮಾರ್, ಗಾಯಕಿಯರಾದ ಮಲ್ಲಿಕಾ ಶೆಟ್ಟಿ, ಹರಿಣಾಕ್ಷಿ, ಶೀಲಾ ಪಡೀಲ್ ಭಾವಗೀತೆಗಳನ್ನು ಹಾಡಿದರು. ಸಂಗೀತ ವಾದಕರಾಗಿ ಸತೀಶ್ ಸುರತ್ಕಲ್, ಶಶಿಧರ್ ಹೆಜಮಾಡಿ, ಗಣೇಶ್ ನವಗಿರಿ, ಪ್ರಥಮ್ ಆಚಾರ್ಯ ಸಹಕರಿಸಿದರು.
ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರರನ್ನು ಕಲಾವಿದರ ಪರವಾಗಿ ಅಭಿನಂದಿಸಲಾಯಿತು.
ಸಮ್ಮೇಳನದ ಅಧ್ಯಕ್ಷೆ ಗೀತಾ ಸುರತ್ಕಲ್, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥ ಎಸ್. ರೇವಣಕರ್, ಸುರತ್ಕಲ್ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಗುಣವತಿ ರಮೇಶ್, ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ (ರಿ) ಕಾಟಿಪಳ್ಳದ ಅಧ್ಯಕ್ಷ ಪಿ. ದಯಾಕರ್, ಆಡಳಿತಾಧಿಕಾರಿ ಡಾ. ಗಣೇಶ ಅಮೀನ್ ಸಂಕಮಾರ್, ಸಂಗೀತ ಕಲಾವಿದರ ಒಕ್ಕೂಟದ ಸದಸ್ಯ ಹುಸೈನ್ ಕಾಟಿಪಳ್ಳ, ಸುರತ್ಕಲ್ ಶಾರದಾ ಮಾತೃ ಮಂಡಳಿಯ ಅಧ್ಯಕ್ಷೆ ತಾರಾ ಧನುರಾಜ್ ಮತ್ತಿತರರು ಉಪಸ್ಥಿತರಿದ್ದರು. ಕಷ್ಣಮೂರ್ತಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


